ಕಾಶ್ಮೀರ ಬಿಕ್ಕಟ್ಟು ಇತ್ಯರ್ಥಕ್ಕೆ ಮೂರನೇ ದೇಶದ ಮಧ್ಯಸ್ಥಿಕೆಗೆ ಪಾಕ್ ಒಲವು

ಇಸ್ಲಮಾಬಾದ್: ಕಾಶ್ಮೀರ ವಿವಾದ ಸೇರಿದಂತೆ ಭಾರತದ ಜೊತೆಗಿನ ಎಲ್ಲ ಭಿನ್ನಮತ ಬಗೆಹರಿಸಲು ಅಂತರರಾಷ್ಟ್ರೀಯ ಸಮುದಾಯವು ಮುಖ್ಯ ಪಾತ್ರ ವಹಿಸುವುದನ್ನು ಸ್ವಾಗತಿಸುವುದಾಗಿ ಪಾಕಿಸ್ತಾನ ಶುಕ್ರವಾರ ಹೇಳಿದೆ.
ಉಭಯ ದೇಶಗಳು ಮಾತುಕತೆಯಲ್ಲಿ ತೊಗಡಿಸಿಕೊಳ್ಳಲು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ವಹಿಸುವುದರ ಕುರಿತು ಪ್ರತಿಕ್ರಿಯಿಸಿದ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್, ಈ ಪ್ರದೇಶದಲ್ಲಿ ಶಾಂತಿ ನೆಲೆಸಲು ಅಮೆರಿಕ ಸೇರಿದಂತೆ ಮೂರನೇ ಅಂತರರಾಷ್ಟ್ರೀಯ ಸಮುದಾಯದ ಮಧ್ಯಸ್ಥಿಕೆಯನ್ನು ಸ್ವಾಗತ ಮಾಡುವುದಾಗಿ ಹೇಳಿದರು.
ಇದನ್ನೂ ಓದಿ: ಬ್ರಿಟನ್ನಲ್ಲಿ ಜಪ್ತಿ ಮಾಡಿರುವ ಯುರೇನಿಯಂ ತನ್ನದಲ್ಲ ಎಂದ ಪಾಕಿಸ್ತಾನ
ಪಾಕಿಸ್ತಾನದ ಜೊತೆಗೆ ಮಾತುಕತೆಗೆ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಭಾರತ ಮೊದಲಿನಿಂದಲೂ ವಿರೋಧಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಈ ಕುರಿತು ಪ್ರತಿಕ್ರಿಯಿಸಲು ಬೇರೆ ಯಾವುದೇ ದೇಶಕ್ಕೆ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಗಡಿಯಾಚೆಗಿನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದು ಪಾಕಿಸ್ತಾನದೊಂದಿಗಿನ ಬಾಂಧವ್ಯ ಹದಗೆಡಲು ಕಾರಣವಾಗಿದೆ. ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ 370ನೇ ವಿಧಿಯನ್ನು ತೆಗೆದು ಹಾಕಿದ ನಂತರ ಉಭಯ ದೇಶಗಳ ನಡುವಿನ ಸಂಬಂಧ ತೀವ್ರವಾಗಿ ಬಿಗಡಾಯಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.