ನ್ಯೂಯಾರ್ಕ್: ಅಮೆರಿಕದೊಳಗೆ ಅಕ್ರಮವಾಗಿ ಪ್ರವೇಶಿಸಿದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಗಡಿ ಗಸ್ತು ಪಡೆಯ ಅಧಿಕಾರಿಗಳು ಬಂಧಿಸಿದ್ದಾರೆ.
‘ಅಮೆರಿಕ ಮತ್ತು ಕೆನಡಾದ ಅಂತರರಾಷ್ಟ್ರೀಯ ಗಡಿ ಬಳಿಯಿರುವ ರಸ್ತೆಯೊಂದರಲ್ಲಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಸೆಪ್ಟೆಂಬರ್ 1 ರಂದು ಮಾಹಿತಿ ಸಿಕ್ಕಿದೆ. ಇದನ್ನು ಆಧರಿಸಿ ಅವರಿಬ್ಬರನ್ನು ಪತ್ತೆ ಹಚ್ಚಲಾಗಿದ್ದು, ವಿಚಾರಣೆ ವೇಳೆ ಅವರು ಪಾಕಿಸ್ತಾನಿ ಪ್ರಜೆಗಳೆಂಬುದು ತಿಳಿದುಬಂದಿದೆ. ಅಮೆರಿಕದಲ್ಲಿ ಅವರು ಅಕ್ರಮವಾಗಿ ವಾಸವಾಗಿದ್ದಾರೆ’ ಎಂದು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಭದ್ರತಾ ಇಲಾಖೆಯು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
2013ರಲ್ಲಿ ಬಂಧಿತರಲ್ಲಿ ಒಬ್ಬನಾಗಿದ್ದ ಅಫ್ತಾಬ್ ಅಕ್ಬರ್ ಹುಸೇನ್ (41)ಎಂಬಾತನನ್ನು ವಲಸೆ ನ್ಯಾಯಾಧೀಶರು ಅಮೆರಿಕದಿಂದ ಗಡಿಪಾರು ಮಾಡಿದ್ದರು. ಆತನ ವಿರುದ್ಧ ಅಪರಾಧವೊಂದು ಸಾಬೀತಾಗಿತ್ತು. ಇದೀಗ ಮತ್ತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. 33 ವರ್ಷದ ಮತ್ತೊಬ್ಬ ವ್ಯಕ್ತಿಯನ್ನು ಕೆನಡಾಗೆ ವಾಪಸ್ ಕಳುಹಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.