ಗುರುವಾರ , ಡಿಸೆಂಬರ್ 3, 2020
20 °C

ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್‌‌ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Hafiz Saeed

ಲಾಹೋರ್: ಮುಂಬೈ ದಾಳಿಯ ಸಂಚುಕೋರ ಹಾಗೂ ಜಮಾತ್–ಉದ್– ದಾವಾ (ಜೆಯುಡಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್‌‌ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಎರಡು ಭಯೋತ್ಪಾದನಾ ಪ್ರಕರಣಗಳಲ್ಲಿ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿರುವ ಸಯೀದ್, ಕಳೆದ ವರ್ಷ ಜುಲೈ 17 ರಂದು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ಎರಡು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಗಳಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು 11 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಸದ್ಯ ಆತನನ್ನು ಲಾಹೋರ್‌ನ ಉನ್ನತ ಭದ್ರತೆಯಿರುವ ಕೋಟ್ ಲಖ್‌ಪತ್ ಜೈಲಿನಲ್ಲಿ ಇರಿಸಲಾಗಿದೆ.
ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಗುರುವಾರ ಜಮಾತ್–ಉದ್– ದಾವಾದ ಮುಖ್ಯಸ್ಥ ಹಫೀಜ್ ಸಯೀದ್ ಸೇರಿದಂತೆ ಅದರ ನಾಲ್ಕು ಮುಖಂಡರಿಗೆ ಇನ್ನೂ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದೆ ಎಂದು ನ್ಯಾಯಾಲಯದ ಅಧಿಕಾರಿಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸಯೀದ್ ಮತ್ತು ಅವರ ಇಬ್ಬರು ಆಪ್ತ ಸಹಾಯಕರಾದ ಜಾಫರ್ ಇಕ್ಬಾಲ್ ಮತ್ತು ಯಾಹ್ಯಾ ಮುಜಾಹಿದ್ ಅವರಿಗೆ ತಲಾ ಹತ್ತೂವರೆ ವರ್ಷ ಶಿಕ್ಷೆ ವಿಧಿಸಲಾಗಿದ್ದು, ಜೆಯುಡಿ ಮುಖ್ಯಸ್ಥರ ಸೋದರ ಮಾವ ಅಬ್ದುಲ್ ರೆಹಮಾನ್ ಮಕ್ಕಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

'ಎಟಿಸಿ ನ್ಯಾಯಾಲಯದ ನಂ 1ರ ನ್ಯಾಯಾಧೀಶ ಅರ್ಷದ್ ಹುಸೇನ್ ಭುಟ್ಟಾ ಅವರು ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಸಲ್ಲಿಸಿದ್ದ ಪ್ರಕರಣ ಸಂಖ್ಯೆ 16/19 ಮತ್ತು 25/19 ಗಳ ವಿಚಾರಣೆ ನಡೆಸಿದರು. ಸಾಕ್ಷಿಗಳ ಹೇಳಿಕೆಗಳನ್ನು ವಕೀಲರಾದ ನಸೀರುದ್ದೀನ್ ನಯ್ಯರ್ ಮತ್ತು ಮೊಹಮ್ಮದ್ ಇಮ್ರಾನ್ ಫಜಲ್ ಗುಲ್ ಅವರು ಪರಿಶೀಲನೆ ನಡೆಸಿದ ನಂತರ ತೀರ್ಪನ್ನು ಪ್ರಕಟಿಸಲಾಗಿದೆ' ಎಂದು ಅಧಿಕಾರಿ ತಿಳಿಸಿದ್ದಾರೆ.

ಜೆಯುಡಿ ನಾಯಕರ ವಿರುದ್ಧ ಒಟ್ಟು 41 ಪ್ರಕರಣಗಳನ್ನು ಸಿಟಿಡಿ ದಾಖಲಿಸಿದೆ. ಈ ಪೈಕಿ 24 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದ್ದು, ಉಳಿದ ಪ್ರಕರಣಗಳು ಎಟಿಸಿ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ. ಈವರೆಗೆ ಸಯೀದ್ ವಿರುದ್ಧದ ನಾಲ್ಕು ಪ್ರಕರಣಗಳು ಇತ್ಯರ್ಥಗೊಂಡಿವೆ.

2008ರ ನವೆಂಬರ್‌ 26ರಂದು ನಡೆದ ಮುಂಬೈ ದಾಳಿಯಲ್ಲಿ ಆರು ಅಮೆರಿಕನ್ನರು ಸೇರಿದಂತೆ 166 ಜನರು ಮೃತಪಟ್ಟಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು