ಪಾಕಿಸ್ತಾನ: ಶೇ 1ರೊಳಗೆ ಬಂದ ಕೋವಿಡ್ ಪಾಸಿಟಿವಿಟಿ ದರ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ಪಾಸಿಟಿವಿಟಿ ದರ ಶೇ 1ಕ್ಕಿಂತ ಕಡಿಮೆಯಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 400 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 11 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ 0.94ರಷ್ಟು ದಾಖಲಾಗಿದೆ ಎಂದು ಸಚಿವಾಲಯ ಹೇಳಿದೆ.
ಪಾಕಿಸ್ತಾನದಲ್ಲಿ ಮೊದಲ ಕೋವಿಡ್ ಪ್ರಕರಣ 2020ರ ಫೆಬ್ರುವರಿ 26ರಂದು ಪತ್ತೆಯಾಗಿತ್ತು. ಪಾಕ್‌ನಲ್ಲಿ ಇಲ್ಲಿಯವರೆಗೆ ಒಟ್ಟಾರೆ 12,77,560 ಜನರಲ್ಲಿ ಕೋವಿಡ್ ದೃಢಪಟ್ಟಿತ್ತು. ಈ ಪೈಕಿ 28,558 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.