ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೊಶಖಾನ ಪ್ರಕರಣ ವಿಚಾರಣೆ: ಇಮ್ರಾನ್ ಖಾನ್‌ ಮತ್ತೆ ಗೈರು

Last Updated 7 ಮಾರ್ಚ್ 2023, 10:46 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ): ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ತೊಶಖಾನ ಪ್ರಕರಣದಲ್ಲಿ ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಎದುರು ವಿಚಾರಣೆಗೆ ಮಂಗಳವಾರವೂ ಹಾಜರಾಗಲಿಲ್ಲ. ಜಾಮೀನು ರಹಿತ ಬಂಧನ ವಾರಂಟ್‌ ರದ್ದು ಮಾಡುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರವಷ್ಟೇ ಕೋರ್ಟ್‌ ವಜಾ ಮಾಡಿತ್ತು.

ಇಮ್ರಾನ್‌ ಖಾನ್‌ ಪರ ವಕೀಲ ಶೇರ್‌ ಅಫ್ಜಲ್‌ ಮಾರ್ವಾಟ್‌ ಅವರು ನ್ಯಾಯಾಲಯದ ಎದುರು ಹಾಜರಾಗಿ, 'ಖಾನ್‌ ಅವರಿಗೆ ಆರೋಗ್ಯ ಸರಿ ಇಲ್ಲ ಎಂಬುದಾಗಿ ತಿಳಿಸಿದರು’ ಎಂದು ಎಕ್ಸ್‌ಪ್ರೆಸ್‌ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಸೆಷನ್ಸ್‌ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗದ ಕಾರಣ ನೀಡಿರುವ ಬಂಧನ ವಾರಂಟ್‌ ವಿರುದ್ಧ ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಪಿಟಿಐ ಪಕ್ಷವು ಮೇಲ್ಮನವಿ ಸಲ್ಲಿಸಿದೆ ಎಂದು ಮಾರ್ವಾಟ್‌ ತಿಳಿಸಿದರು.

ಪ್ರಕರಣದ ವಿಚಾರಣೆಗೆ ಮುಂದಿನವಾರ ದಿನಾಂಕ ನಿಗದಿ ಮಾಡಬೇಕು. ಆಗ ಖಾನ್‌ ಅವರು ವಿಚಾರಣೆಗೆ ಹಾಜರಾಗಬಹುದು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT