ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ವರ್ಷದ ಬಳಿಕ ಪ್ಯಾಲೆಸ್ಟೀನ್‌ ಅಧ್ಯಕ್ಷರಿಂದ ಇಸ್ರೇಲ್‌ ಭೇಟಿ

Last Updated 29 ಡಿಸೆಂಬರ್ 2021, 11:14 IST
ಅಕ್ಷರ ಗಾತ್ರ

ಜೆರುಸಲೆಂ: ಹನ್ನೊಂದು ವರ್ಷಗಳ ಬಳಿಕ ಪ್ಯಾಲೆಸ್ಟೀನ್‌ನ ಅಧ್ಯಕ್ಷ ಮೊಹಮ್ಮದ್‌ ಅಬ್ಬಾಸ್‌ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದು, ಇಸ್ರೇಲ್‌ನ ರಕ್ಷಣಾ ಸಚಿವ ಬೆನ್ನಿ ಗಾಂಟ್ಜ್‌ ಅವರೊಂದಿಗೆ ಟೆಲ್‌ ಅವೀವ್‌ ಉಪನಗರದ ಬೆನ್ನಿ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ.

ಇದರ ಫಲವೆಂಬಂತೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವಿಶ್ವಾಸ ಕುದುರಿಸುವ ಕ್ರಮಗಳನ್ನು ಒಳಗೊಂಡ ಪ್ಯಾಕೇಜ್‌ ಅನ್ನು ಇಸ್ರೇಲ್‌ ಪ್ರಕಟಿಸಿದೆ.

‘ಇಸ್ರೇಲ್‌ ಮತ್ತು ಪ್ಯಾಲೆಸ್ಟೀನ್‌ಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್ಥಿಕ ಮತ್ತು ನಾಗರಿಕ ಕ್ರಮಗಳನ್ನು ಜಾರಿಗೊಳಿಸುವುದು ಹಾಗೂ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹತ್ತಿಕ್ಕುವ ಸಲುವಾಗಿ ಭದ್ರತಾ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ನಾವು ಮಾತುಕತೆ ನಡೆಸಿದ್ದೇವೆ’ ಎಂದು ಸಭೆಯ ಬಳಿಕ ಗಾಂಟ್ಜ್‌ ತಿಳಿಸಿದರು.

ಪಶ್ಚಿಮ ದಂಡೆಯ ಆಕ್ರಮಿತ ಪ್ರದೇಶದಲ್ಲಿ ಸಂಗ್ರಹಿಸಲಾದ ತೆರಿಗೆಯನ್ನು ಪ್ಯಾಲೆಸ್ಟೀನ್‌ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದು, ನೂರಾರು ಪ್ಯಾಲೆಸ್ಟೀನ್‌ ವ್ಯಾಪಾರಿಗಳು ಮತ್ತು ಗಣ್ಯ ವ್ಯಕ್ತಿಗಳಿಗೆ ಮಾನ್ಯತೆ ನೀಡುವುದು ಹಾಗೂ ಪಶ್ಚಿಮ ದಂಡೆ ಮತ್ತು ಗಾಜಾ ಪಟ್ಟಿಯಲ್ಲಿ ನೂರಾರು ಪ್ಯಾಲೆಸ್ಟೀನಿಯನ್ನರ ವಾಸಸ್ಥಳವನ್ನು ಅಧಿಕೃತಗೊಳಿಸುವುದು ಈ ವಿಶ್ವಾಸ ವೃದ್ಧಿ ಕ್ರಮಗಳಲ್ಲಿ ಸೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT