ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ದಂಡೆಯಲ್ಲಿ ಇಸ್ರೇಲ್‌ ದಾಳಿ: 9 ಮಂದಿ ಸಾವು

Last Updated 22 ಫೆಬ್ರುವರಿ 2023, 14:00 IST
ಅಕ್ಷರ ಗಾತ್ರ

ಜೆರುಸಲೇಂ: ಪಶ್ಚಿಮ ದಂಡೆಯ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್‌ ಸೇನೆ ಬುಧವಾರ ನಡೆಸಿದ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಪ್ಯಾಲಸ್ಟೀನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ದಂಡೆಯ ಉತ್ತರ ಭಾಗದ ನಬ್ಲುಸ್‌ ಎಂಬಲ್ಲಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮೃತರಲ್ಲಿ 102 ವರ್ಷದ ವ್ಯಕ್ತಿಯು ಸೇರಿದ್ದಾರೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಕಳೆದ ತಿಂಗಳು ಜೆರುಸಲೇಂ ಪ್ರಾರ್ಥನಾ ಮಂದಿರದ ಬಳಿಯೂ ಇದೇ ರೀತಿಯ ದಾಳಿ ನಡೆದಿತ್ತು. ಈ ಸಂದರ್ಭ ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ ಎಂದು ಹಮಾಸ್ ಭಯೋತ್ಪಾದಕ ಸಂಘಟನೆ ಹೇಳಿತ್ತು.

ಭಯೋತ್ಪಾದಕರ ಚಟುವಟಿಕೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ನಬ್ಲುಸ್‌ ನಗರದಲ್ಲಿ ಈ ದಾಳಿ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT