ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಕ್ರಾಮಿಕ ರೋಗವಿನ್ನು ತಗ್ಗಿಲ್ಲ: ವಿಜ್ಞಾನಿ ಸೌಮ್ಯ ಸ್ವಾಮಿನಾಥನ್‌ ಎಚ್ಚರಿಕೆ

ಅಕ್ಷರ ಗಾತ್ರ

ಜಿನೆವಾ: ವಿಶ್ವದಾದ್ಯಂತ ಹೆಚ್ಚಿನ ಪ್ರದೇಶಗಳಲ್ಲಿ ಕೊರೊನಾ ಸೋಂಕಿನ ಡೆಲ್ಟಾ ರೂಪಾಂತರಿ ಹೆಚ್ಚಾಗಿ ವ್ಯಾಪಿಸುತ್ತಿದೆ. ಇದು ಸಾಂಕ್ರಾಮಿಕ ರೋಗವಿನ್ನು ತಗ್ಗಿಲ್ಲ ಎಂಬುದಕ್ಕೆ ಸ್ಪಷ್ಟ ಪುರಾವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್‌ ಎಚ್ಚರಿಸಿದ್ದಾರೆ.

ಕೋವಿಡ್‌ ಲಸಿಕೆಗಳನ್ನು ನೀಡುವಿಕೆಯನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ರಾಷ್ಟ್ರಗಳಲ್ಲಿ ರೋಗಿ ಗಂಭೀರ ಸ್ಥಿತಿಗೆ ತಲುಪುವ ಪ್ರಮಾಣವನ್ನು ಕಡಿಮೆ ಮಾಡಿದೆ. ಆಸ್ಪತ್ರೆ ಸೇರುವ ಹಾಗೂ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗುವ ಪ್ರಮಾಣವು ಕಡಿಮೆಯಾಗಿದೆ. ಆದರೆ ವಿಶ್ವದ ಹೆಚ್ಚಿನ ಭಾಗಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆಯಿದೆ. ಸಾವಿನ ಪ್ರಮಾಣವೂ ಅಧಿಕವಾಗಿದೆ ಎಂದು ಸೌಮ್ಯ ಸ್ವಾಮಿನಾಥನ್‌ ತಿಳಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಸುಮಾರು 5 ಲಕ್ಷ ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಸುಮಾರು 9,300 ಮಂದಿ ಮೃತಪಟ್ಟಿದ್ದಾರೆ. ಇದು ಸಾಂಕ್ರಾಮಿಕ ರೋಗ ಕಡಿಮೆಯಾಗುತ್ತಿರುವ ಲಕ್ಷಣವಲ್ಲ ಎಂದು ಸ್ವಾಮಿನಾಥನ್‌ ಹೇಳಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಆಫ್ರಿಕಾದಲ್ಲಿ ಕೋವಿಡ್‌ನಿಂದ ಮೃತರಾಗುತ್ತಿರುವವ ಸಂಖ್ಯೆ ಎರಡು ವಾರಗಳಲ್ಲಿ ಶೇಕಡಾ 30-40ರಷ್ಟು ಏರಿಕೆಯಾಗಿದೆ. ಇದಕ್ಕೆ ಪ್ರಮುಖ ಕಾರಣ ಡೆಲ್ಟಾ ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದೆ. ಲಸಿಕೆ ನೀಡುವಿಕೆಯ ಪ್ರಕ್ರಿಯೆ ನಿಧಾನಗತಿಯಾಗುತ್ತಿರುವುದು ಹಾಗೂ ಜನ ಸುರಕ್ಷತೆಯ ಕ್ರಮಗಳನ್ನು ಪಾಲಿಸದಿರುವು ಇದಕ್ಕೆ ಕಾರಣವಾಗಿದೆ. ಮಾಸ್ಕ್‌ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದನ್ನು ನಿರ್ಲಕ್ಷಿಸುತ್ತಿರುವುದು ಹೆಚ್ಚಾಗಿದೆ ಎಂದು ಸ್ವಾಮಿನಾಥನ್‌ ಕಳವಳ ವ್ಯಕ್ತ ಪಡಿಸಿದ್ದಾರೆ.

ಇಂಗ್ಲೆಂಡ್‌ನಲ್ಲಿ ಜುಲೈ 19ರಿಂದ ಮಾಸ್ಕ್‌ ಧರಿಸುವುದು ಅಥವಾ ಬಿಡುವುದು ನಾಗರಿಕನಿಗೆ ಬಿಟ್ಟ ಸ್ವಾತಂತ್ರ್ಯವಾಗಿದೆ. ಅಮೆರಿಕ ಮತ್ತು ಯೂರೋಪ್‌ ರಾಷ್ಟ್ರಗಳಲ್ಲು ಕೋವಿಡ್‌ ನಿಯಮಗಳನ್ನು ಸಡಿಲಿಸಲಾಗಿದೆ ಎಂದು 'ಬ್ಲೂಮ್‌ಬರ್ಗ್‌' ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT