ಪೆನ್ಸಿಲ್ವೇನಿಯಾ: ಇಲ್ಲಿನ ಚಾಕೊಲೆಟ್ ಕಾರ್ಖಾನೆಯಲ್ಲಿ ಶುಕ್ರವಾರ ಸ್ಫೋಟಗೊಂಡು ಐವರು ಮೃತಪಟ್ಟಿದ್ದು, ಆರು ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್.ಎಂ.ಪಾಮರ್ ಕಂಪನಿಯ ಸ್ಥಾವರ ಸ್ಫೋಟಗೊಂಡಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ವೆಸ್ಟ್ ರಿಡಿಂಗ್ ಬರೋದ ಪೊಲೀಸ್ ವಿಭಾಗದ ಮುಖ್ಯಸ್ಥ ವೇನ್ ಹಾಲ್ಬೆನ್ ತಿಳಿಸಿದ್ದಾರೆ.
ಸಂಜೆ 5 ಗಂಟೆಗೂ ಮೊದಲು ಸ್ಫೋಟ ಕಾಣಿಸಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿರುವ ಕಟ್ಟಡಗಳಿಗೂ ವ್ಯಾಪಿಸಿತು. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.