ಬುಧವಾರ, ಆಗಸ್ಟ್ 17, 2022
27 °C
ನೂತನ ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಭಾರತದಲ್ಲಿ ರೈತರ ಹೋರಾಟ

ಶಾಂತಿಯುತ ಪ್ರತಿಭಟನೆ ಜನರ ಹಕ್ಕು: ವಿಶ್ವಸಂಸ್ಥೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ‘ನಾಗರಿಕರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದ್ದು, ಸರ್ಕಾರಗಳು ಅದಕ್ಕೆ ಅವಕಾಶ ಮಾಡಿಕೊಡಬೇಕು‘ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿನೊ ಗುಟೆರಸ್‌ ಹೇಳಿದ್ದಾರೆ.

ನೂತನ ಕೃಷಿ ಕಾಯ್ದೆಗಳ ರದ್ದತಿಗಾಗಿ ಒತ್ತಾಯಿಸಿ ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ವಕ್ತಾರ ಸ್ಟೀಫನ್ ಡುಜಾರಿಕ್‌ ಅವರೂ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಅವರು ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ನೀಡಿದ ಹೇಳಿಕೆಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು. 

ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರು, ‘ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರಗಳ ಆಂತರಿಕ ವಿಚಾರಗಳಿಗೆ ಸಂಬಂಧಿಸಿ ನೀಡುವ ಇಂಥ ಪ್ರತಿಕ್ರಿಯೆಗಳು ಅನಪೇಕ್ಷಿತ ಹಾಗೂ ಅನಗತ್ಯ‘ ಎಂದು ಪ್ರತಿಕ್ರಿಯಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು