ಸೋಮವಾರ, ನವೆಂಬರ್ 29, 2021
21 °C
ಮೋದಿ, ಇಸ್ರೇಲ್‌ ಪ್ರಧಾನಿ ಬೆನೆಟ್‌ ಮಾತುಕತೆ

ಇಸ್ರೇಲ್‌ನೊಂದಿಗಿನ ಸ್ನೇಹಕ್ಕೆ ಭಾರತೀಯರು ಮಹತ್ವ ನೀಡುತ್ತಾರೆ: ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗ್ಲಾಸ್ಗೋ: ‘ಭಾರತೀಯರು ಇಸ್ರೇಲ್‌ನೊಂದಿಗಿನ ಸ್ನೇಹಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.

‘ಸಿಒಪಿ26 ಹವಾಮಾನ ಬದಲಾವಣೆ ಶೃಂಗಸಭೆ’ ಸಂದರ್ಭದಲ್ಲಿ ಇಸ್ರೇಲ್‌ ಪ್ರಧಾನಿ ನಫ್ತಾಲಿ ಬೆನೆಟ್‌ ಅವರೊಂದಿಗೆ ನಡೆಸಿದ ಮಾತುಕತೆ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

‘ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಎರಡೂ ದೇಶಗಳು ಒಟ್ಟಿಗೆ ಶ್ರಮಿಸುವುದು ಅಗತ್ಯ’ ಎಂದು ಮೋದಿ ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊನೆಗೂ ಭೇಟಿಯಾಗಿರುವುದು ಖುಷಿ ತಂದಿದೆ’ ಎಂದು ನಫ್ತಾಲಿ ಬೆನೆಟ್‌ ಅವರು ಟ್ವೀಟ್‌ ಮಾಡಿದ್ದಾರೆ.

ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸಹ ನಫ್ತಾಲಿ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಇದೇ ಸಂದರ್ಭದಲ್ಲಿ ಚರ್ಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು