ಶುಕ್ರವಾರ, ಡಿಸೆಂಬರ್ 4, 2020
22 °C

ರಸ್ತೆಯಲ್ಲೇ ಪತ್ನಿಯನ್ನು ಕೊಂದ ಪತಿ: ಚೀನಾದಲ್ಲಿ ಕೌಟಂಬಿಕ ದೌರ್ಜನ್ಯಕ್ಕೆ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್: ನಡುರಸ್ತೆಯಲ್ಲೇ ವ್ಯಕ್ತಿಯೊಬ್ಬ ಪತ್ನಿಯನ್ನು ಹೊಡೆದು ಕೊಂದ ಘಟನೆಯು ಚೀನಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇಲ್ಲಿ ನಡೆಯುವ ಕೌಟಂಬಿಕ ದೌರ್ಜನ್ಯಗಳಿಗೆ ಕೊನೆಯಿಲ್ಲ ಎಂಬಂತೆ ಈ ಘಟನೆ ಮರುಕಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊ ಆಕ್ರೋಶಕ್ಕೆ ಕಾರಣವಾಗಿದೆ. ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಸ್ಕೂಟರ್ ಮೇಲಿದ್ದ ತನ್ನ ಪತ್ನಿಯ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ಮೂಕ ಪ್ರೇಕ್ಷಕರಂತೆ ವರ್ತಿಸಿದ್ದು ಯಾರೊಬ್ಬರು ಆ ಮಹಿಳೆಯ ಸಹಾಯಕ್ಕೆ ಹೋಗದ ಕಾರಣ ಗಂಭೀರವಾಗಿ ಗಾಯಗೊಂಡಿದ ಆ ಮಹಿಳೆ ಮೃತಪಟ್ಟಿದ್ದಾರೆ. ಸ್ಥಳೀಯರ ವರ್ತನೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.

ಚೀನಾದ ಶುವೋಝೌ ನಗರದಲ್ಲಿ ಈ ಘಟನೆ ನಡೆದಿದ್ದು ದಂಪತಿಗಳು ವಿದ್ಯುತ್ ಚಾಲಿತ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಸಣ್ಣ ಅಪಘಾತ ನಡೆದಿದೆ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ಮಧ್ಯೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ ಎನ್ನಲಾಗಿದೆ.

ಚೀನಾದಲ್ಲಿ ಕೌಟಂಬಿಕ ದೌರ್ಜನ್ಯಗಳು ಹೆಚ್ಚುತ್ತಿದ್ದು ಮಹಿಳೆಯರ ಸುರಕ್ಷತೆಗೆ ಕ್ರಮಕೈಗೊಳ್ಳುವಂತೆ ಹಲವು ಸಂಘ ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸಿವೆ. ಈ ಘಟನೆ ವಿಶ್ವದ ಗಮನ ಸೆಳೆದಿರುವುದು ವಿಶೇಷ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು