ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೈಜರ್, ಜಾನ್ಸನ್ ಲಸಿಕೆ ಡೆಲ್ಟಾ ವಿರುದ್ಧ ಪರಿಣಾಮಕಾರಿ: ದಕ್ಷಿಣ ಆಫ್ರಿಕಾ ತಜ್ಞರು

Last Updated 3 ಜುಲೈ 2021, 8:35 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್: ಅಮೆರಿಕದ ಫೈಜರ್ ಮತ್ತು ಜಾನ್ಸನ್ ಆ್ಯಂಡ್ ಜಾನ್ಸನ್ ಕೋವಿಡ್ ಲಸಿಕೆಗಳು ಕೊರೊನಾ ವೈರಸ್‌ನ ಬೇಟಾ ರೂಪಾಂತರಕ್ಕಿಂತಲೂ ಡೆಲ್ಟಾ ವಿರುದ್ಧ ಹೆಚ್ಚು ಪರಿಣಾಮಕಾರಿ ಎಂದು ದಕ್ಷಿಣ ಆಫ್ರಿಕಾ ತಜ್ಞರು ಹೇಳಿದ್ದಾರೆ. ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಈ ಲಸಿಕೆಗಳನ್ನು ನೀಡಲಾಗುತ್ತಿದೆ.

ಬೇಟಾ ರೂಪಾಂತರವು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡಿದ್ದು, ಅಲ್ಲಿ ಎರಡನೇ ಅಲೆಗೆ ಕಾರಣವಾಗಿತ್ತು. ಭಾರತದಲ್ಲಿ ಮೊದಲು ಕಾಣಿಸಿಕೊಂಡಿದ್ದು ಎನ್ನಲಾದ ಡೆಲ್ಟಾ ರೂಪಾಂತರ ತಳಿ ಈಗ ಆಫ್ರಿಕಾದಲ್ಲಿ ಕೋವಿಡ್ ಮೂರನೇ ಅಲೆಗೆ ಕಾರಣವಾಗಿದೆ. ಮೂರನೇ ಅಲೆಯಲ್ಲಿ ಮೊದಲೆರಡು ಬಾರಿಗಿಂತಲೂ ಸಾವಿನ ಸಂಖ್ಯೆ ಈಗಾಗಲೇ ಹೆಚ್ಚಾಗಿದೆ. ಲಾಕ್‌ಡೌನ್‌ ನಿರ್ಬಂಧಗಳು ಹೆಚ್ಚಿಸಲಾಗಿದೆ.

ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ನೀಡಿಕೆ ವಿಷಯಕ್ಕೆ ಸಂಬಂಧಿಸಿ ಹಂಗಾಮಿ ಆರೋಗ್ಯ ಸಚಿವೆ ಮೆಮೊಲೊಕೊ ಕುಬೇಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಈ ವೇಳೆ, ಲಸಿಕೆಗಳು ಡೆಲ್ಟಾ ವಿರುದ್ಧ ಪರಿಣಾಮಕಾರಿ ಎಂಬುದು ಪ್ರಯೋಗಾಲಯ ಪರೀಕ್ಷೆಗಳಿಂದ ಮತ್ತು ಇತರ ಅಧ್ಯಯನಗಳಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

‘ಜಾನ್ಸನ್ ಆ್ಯಂಡ್ ಜಾನ್ಸನ್ ಲಸಿಕೆಯು ಡೆಲ್ಟಾ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿದೆ. ಭವಿಷ್ಯದಲ್ಲಿ ಡೆಲ್ಟಾ ಮತ್ತು ಬೇಟಾ ರೂಪಾಂತರಗಳ ವಿರುದ್ಧವೂ ಪರಿಣಾಮಕಾರಿಯಾಗಲಿದೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ’ ಎಂದು ದಕ್ಷಿಣ ಆಫ್ರಿಕಾ ವೈದ್ಯಕೀಯ ಸಂಶೋದನಾ ಮಂಡಳಿಯ ಪ್ರಾಧ್ಯಾಪಕ ಗ್ಲೆಂಡಾ ಗ್ರೇ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT