ಮಂಗಳವಾರ, ಅಕ್ಟೋಬರ್ 26, 2021
20 °C

ಫಿಲಿಫೈನ್ಸ್‌ ಅಧ್ಯಕ್ಷರಿಂದ ರಾಜಕೀಯ ನಿವೃತ್ತಿ ಘೋಷಣೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಮನಿಲಾ, ಫಿಲಿಫೈನ್ಸ್‌: ಪ್ರಸಕ್ತ ಆಡಳಿತಾವಧಿ ಮುಗಿದ ಬಳಿಕ ತಾವು ರಾಜಕೀಯ ನಿವೃತ್ತಿ ಪಡೆಯಲಿದ್ದು, ಮುಂದಿನ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಫಿಲಿಪ್ಪೀನ್ಸ್‌ ಅಧ್ಯಕ್ಷ ರೊಡ್ರಿಗೊ ಡುಟೆರ್ಟೆ ಹೇಳಿದ್ದಾರೆ. 

ಡುಟೆರ್ಟೆ ತನ್ನ ಮಾಜಿ ಸಹಾಯಕ ಸೆನೆಟರ್‌ ಬಾಂಗ್‌ ಗೊ ಜೊತೆಗೆ ಶನಿವಾರ ಚುನಾವಣಾ ಆಯೋಗ ಕೇಂದ್ರಕ್ಕೆ ತೆರಳಿದ್ದ ವೇಳೆ ಅವರು ದೀಢೀರನೇ ಈ ಘೋಷಣೆ ಮಾಡಿದ್ದಾರೆ. ಡುಟೆರ್ಟೆ 2016ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು.  

ಫಿಲಿಪ್ಪೀನ್ಸ್‌ ಅಧ್ಯಕ್ಷರ ಅಧಿಕಾರವಧಿ ಸಂವಿಧಾನದ ಪ್ರಕಾರ ಆರು ವರ್ಷಗಳು. ಹೀಗಾಗಿ, ಡುಟೆರ್ಟೆ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ವಿರೋಧಪಕ್ಷಗಳು ಹೇಳಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು