ಕಠ್ಮಂಡು: ನೇಪಾಳದಲ್ಲಿ ಪ್ರಯಾಣಿಕ ವಿಮಾನವೊಂದು ಭಾನುವಾರ ಪತನಗೊಂಡಿದ್ದು ಕ್ಷಿಪ್ರಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.
ವಿಮಾನದಲ್ಲಿ ಒಟ್ಟು 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು. ಇದು ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವು ನೋವಿನ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲಿಂದ ಹೊರಟ್ಟಿದ್ದ ವಿಮಾನ, ಘಟನೆ ಹೇಗಾಯಿತು ಎಂಬ ಕುರಿತು ಇನ್ನಷ್ಟೇ ವಿವರಗಳು ಲಭ್ಯವಾಗಬೇಕಿದೆ. ಆದರೆ ಪೂರ್ತಿ ವಿಮಾನ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.