ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಪ್ರಧಾನಿ ಇಮ್ರಾನ್‌ ಖಾನ್‌ ಹತ್ಯೆಗೆ ಸಂಚು –ಸಚಿವ ಫವಾದ್‌ ಚೌಧರಿ ಆರೋಪ

Last Updated 1 ಏಪ್ರಿಲ್ 2022, 10:52 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಲಾಗುತ್ತಿದೆ ಎಂಬುದಾಗಿ ಭದ್ರತಾ ಸಂಸ್ಥೆಗಳು ವರದಿ ಮಾಡಿವೆ’ ಎಂದು ಪಾಕಿಸ್ತಾನ ವಾರ್ತಾ ಸಚಿವ ಫವಾದ್‌ ಚೌಧರಿ ಶುಕ್ರವಾರ ಹೇಳಿದ್ದಾರೆ.

ಈ ವರದಿಯ ಬೆನ್ನಲ್ಲೇ, ಪ್ರಧಾನಿ ಇಮ್ರಾನ್‌ ಖಾನ್‌ ಅವರ ಭದ್ರತೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಚೌಧರಿ ಹೇಳಿರುವುದಾಗಿ ಡಾನ್‌ ಪತ್ರಿಕೆ ವರದಿ ಮಾಡಿದೆ.

ಪ್ರಧಾನಿ ಇಮ್ರಾನ್‌ ಖಾನ್‌ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಮತದಾನ ಭಾನುವಾರ ನಡೆಯಲಿದೆ.

‘ಇಮ್ರಾನ್‌ ಖಾನ್‌ ಅವರ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ’ ಎಂದು ಆಡಳಿತಾರೂಢ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ (ಪಿಟಿಐ) ನಾಯಕ ಫೈಸಲ್ ವಾವ್ಡಾ ಅವರು ವಾರದ ಹಿಂದಷ್ಟೇ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಸಚಿವ ಚೌಧರಿ ಅವರಿಂದಲೂ ಇಂತಹ ಹೇಳಿಕೆ ಹೊರಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT