ಢಾಕಾ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಬಾಂಗ್ಲಾದೇಶದ ಪ್ರವಾಸಕ್ಕಾಗಿ ಶುಕ್ರವಾರ ಢಾಕಾಕ್ಕೆ ಆಗಮಿಸಿದರು.

ಕೊರೊನಾ ಸಾಂಕ್ರಾಮಿಕದ ನಂತರದ ಮೊದಲ ವಿದೇಶಿ ಪ್ರಯಾಣದಲ್ಲಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಇಲ್ಲಿನ ಹಜರತ್ ಶಹಜಲಾಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ವಿಮಾನದಿಂದ ಇಳಿಯುವ ಮುನ್ನ ಮಾಸ್ಕ್ ಧರಿಸಿದ ಪ್ರಧಾನಿ ಮೋದಿಯವರು, ನಂತರ ಶೇಖ್ ಹಸೀನಾ ಅವರಿಂದ ಸ್ವಾಗತವನ್ನು ಸ್ವೀಕರಿಸಿದರು.

ಈ ಎರಡು ದಿನಗಳ ಪ್ರವಾಸದಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸುವರ್ಣ ಮಹೋತ್ಸವ, 'ಬಂಗಬಂಧು' ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಗಣ್ಯ ವ್ಯಕ್ತಿಗಳ ಪ್ರಯಾಣಕ್ಕಾಗಿಯೇ ಇರುವ ಬೋಯಿಂಗ್ 777 ವಿಮಾನದಲ್ಲಿ ಪ್ರಧಾನಿ ನರೇಂದ್ರಮೋದಿಯವರು ಢಾಕಾಕ್ಕೆ ತೆರಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.