ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವ ಸಂಪ್ರದಾಯ ಗೌರವಿಸಿ: ಬ್ರೆಜಿಲ್ ಸಂಸತ್ ಮೇಲಿನ ದಾಳಿಗೆ ಮೋದಿ ಬೇಸರ

Last Updated 9 ಜನವರಿ 2023, 5:46 IST
ಅಕ್ಷರ ಗಾತ್ರ

ನವದೆಹಲಿ: ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ಭಾನುವಾರ ರಾಜಧಾನಿ ಬ್ರೆಸಿಲಿಯಾದಲ್ಲಿ ನಡೆಸಿದ ದಾಂಧಲೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

'ಬ್ರೆಸಿಲಿಯಾದಲ್ಲಿ ಸರ್ಕಾರಿ ಸಂಸ್ಥೆಗಳ ಮೇಲೆ ನಡೆದ ದಾಳಿ, ಗಲಭೆ ಮತ್ತು ವಿಧ್ವಂಸಕ ಕೃತ್ಯಗಳ ಬಗ್ಗೆ ತೀವ್ರ ಕಳವಳವಾಗಿದೆ. ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು. ಬ್ರೆಜಿಲ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಬ್ರೆಜಿಲ್‌ ಮಾಜಿ ಅಧ್ಯಕ್ಷ ಜೈರ್‌ ಬೋಲ್ಸನಾರೊ ಅವರ ಇತ್ತೀಚಿನ ಚುನಾವಣಾ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಪ್ರತಿಭಟನಾಕಾರರು, ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ನಡೆಸುವ ಮೂಲಕ ಪ್ರತಿಕಾರದ ಕ್ರಮಕ್ಕೆ ಮುಂದಾಗಿದ್ದಾರೆ.

ಸುಪ್ರೀಂ ಕೋರ್ಟ್, ಕಾಂಗ್ರೆಸ್‌ (ಸಂಸತ್‌), ಅಧ್ಯಕ್ಷೀಯ ಭವನದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ.

2022ರ ಅಕ್ಟೋಬರ್ 31 ರಂದು ನಡೆದ ಚುನಾವಣೆಯಲ್ಲಿ ಬೋಲ್ಸನಾರೊ ಅವರನ್ನು ಎಡಪಂಥೀಯ ನಾಯಕ ಲೂಯಿಸ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಕಡಿಮೆ ಅಂತರದಿಂದ ಸೋಲಿಸಿ ಅಧಿಕಾರಕ್ಕೆರಿದ್ದರು. ಅದಾದ ಒಂದು ವಾರದಲ್ಲೇ ಈ ಗಲಭೆಗಳು ಭುಗಿಲೆದ್ದಿವೆ.

ಘಟನೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಾನೂನು ಸಚಿವ ಫ್ಲೇವಿಯೊ ಡಿನೋ, ‘ಇದುವರೆಗೆ ಕನಿಷ್ಠ 200 ಗಲಭೆಕೋರರನ್ನು ಬಂಧಿಸಲಾಗಿದೆ ಮತ್ತು ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಹೊರಹಾಕುವಲ್ಲಿ ಯಶಸ್ವಿಯಾಗಿವೆ. ಕಾಂಗ್ರೆಸ್ (ಸಂಸತ್ತು), ಸುಪ್ರೀಂ ಕೋರ್ಟ್ ಮತ್ತು ಅಧ್ಯಕ್ಷೀಯ ಭವನ ಮತ್ತು ಸುತ್ತಮುತ್ತಲಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT