ಮಂಗಳವಾರ, ನವೆಂಬರ್ 29, 2022
28 °C

ಜಪಾನ್‌ನ ಮಾಜಿ ಪ್ರಧಾನಿ ಅಬೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜುಲೈನಲ್ಲಿ ಹಂತಕನ ಗುಂಡಿಗೆ ಬಲಿಯಾದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊಗೆ ತೆರಳಲಿದ್ದಾರೆ. 

ಮಂಗಳವಾರ ಅಂತ್ಯಕ್ರಿಯೆ ನಡೆಯಲಿದ್ದು ವಿಶ್ವದ ಸುಮಾರು 100 ದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. 

ಜಪಾನ್‌ಗೆ ಭೇಟಿ ನೀಡುವ ಸಮಯದಲ್ಲಿ ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಧಾನಿ ಫುಮಿಯೊ ಕಿಶಿದಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಅಬೆ ಅವರ ಪತ್ನಿಯನ್ನೂ ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು