ಶನಿವಾರ, ಮೇ 21, 2022
25 °C

ಜರ್ಮನಿ ತಲುಪಿದ ಪ್ರಧಾನಿ ಮೋದಿ; ಯುರೋಪ್‌ನ 3 ರಾಷ್ಟ್ರಗಳ ಪ್ರವಾಸ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ಬರ್ಲಿನ್‌: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಜರ್ಮನಿಗೆ ಬಂದಿಳಿದರು. ಇಂದಿನಿಂದ ಯುರೋಪ್‌ನ ಜರ್ಮನಿ, ಡೆನ್ಮಾರ್ಕ್‌ ಮತ್ತು ಫ್ರಾನ್ಸ್‌ ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ.

ಇಂದು ಪ್ರಧಾನಿ ಮೋದಿ ಜರ್ಮನಿಯ ಚಾನ್ಸೆಲರ್‌ ಓಲಾಫ್ ಸ್ಕೋಲ್ಜ್ ಅವರನ್ನು ಬರ್ಲಿನ್‌ನಲ್ಲಿ ಭೇಟಿಯಾಗಲಿದ್ದಾರೆ. ಡೆನ್ಮಾರ್ಕ್‌ನ ಕೋಪನ್‌ಹೇಗನ್‌ನಲ್ಲಿ ಮೇ 3–4 ರಂದು ನಡೆಯುವ ದ್ವಿಪಕ್ಷೀಯ ಮಾತುಕತೆಯಲ್ಲಿ ಹಾಗೂ ಭಾರತ-ನಾರ್ಡಿಕ್ ರಾಷ್ಟ್ರಗಳ ಎರಡನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿಮಾನದಿಂದ ಇಳಿದ ಪ್ರಧಾನಿ ಒಂದು ಕೈಯನ್ನು ಶಾಲಿನಿಂದ ಪೂರ್ತಿ ಸುತ್ತಿಕೊಂಡಿರುವುದು ಕಂಡು ಬಂತು. ಬೆಳಿಗ್ಗೆ ಬರ್ಲಿನ್‌ನಲ್ಲಿ ಉಷ್ಣಾಂಶ 8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

'ಯುರೋಪ್‌ ಹಲವು ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಅಲ್ಲಿಗೆ ಪ್ರವಾಸ ಕೈಗೊಳ್ಳಲಾಗುತ್ತಿದೆ. ಯುರೋಪಿಯನ್‌ ಪಾಲುದಾರರೊಂದಿಗೆ ಸಹಕಾರವನ್ನು ಬಲಪಡಿಸುವ ಉದ್ದೇಶವನ್ನು ಪ್ರಸ್ತುತ ಭೇಟಿ ಹೊಂದಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಆರಂಭಕ್ಕೂ ಮುನ್ನ ಹೇಳಿದ್ದರು.

'ಭಾರತ ಮತ್ತು ಜರ್ಮನಿ ನಡುವಿನ ದೀರ್ಘಾವಧಿಯ ವಾಣಿಜ್ಯ ಸಂಬಂಧಗಳು ಕಾರ್ಯತಂತ್ರದ ಪಾಲುದಾರಿಕೆಯ ಆಧಾರ ಸ್ತಂಭಗಳಲ್ಲಿ ಒಂದಾಗಿವೆ. ಉದ್ಯಮ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಚಾನ್ಸೆಲರ್ ಸ್ಕೋಲ್ಜ್ ಅವರೊಟ್ಟಿಗೆ ವಾಣಿಜ್ಯ ಕ್ಷೇತ್ರದ ದುಂಡುಮೇಜಿನ ಸಭೆಯಲ್ಲಿ ಮಾತನಾಡಲಾಗುವುದು' ಎಂದು ತಿಳಿಸಿದ್ದರು.

ಈ ವರ್ಷದ ಮೊದಲ ವಿದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು ಮೂರು ದಿನಗಳಲ್ಲಿ 25 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದನ್ನೂ ಓದಿ–

ಭಾರತಕ್ಕೆ ಹಿಂತಿರುಗುವ ಸಂದರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮೋದಿ ಪ್ಯಾರಿಸ್‌ನಲ್ಲಿ ಭೇಟಿ ಮಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು