ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂ. 14ರಂದು ವಿಶ್ವಸಂಸ್ಥೆ ಸಮಾವೇಶದಲ್ಲಿ ಮೋದಿ ಭಾಷಣ

Last Updated 11 ಜೂನ್ 2021, 5:38 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯು ವರ್ಚುವಲ್ ವಿಧಾನದ ಮೂಲಕ ಜೂನ್‌ 14ರಂದು ಆಯೋಜಿಸಿರುವ ಉನ್ನತ ಮಟ್ಟದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಣ್ಣಿನ ಗುಣಮಟ್ಟ ನಾಶ, ಮರುಭೂಮೀಕರಣ ಹಾಗೂ ಬರ ಪರಿಸ್ಥಿತಿ ಕುರಿತು ಮಾತನಾಡುವರು.

ವಿಶ್ವಸಂಸ್ಥೆಯ 75ನೇ ಸಾಮಾನ್ಯಸಭೆಯ ಅಧ್ಯಕ್ಷರಾದ ವೋಲ್ಕನ್‌ ಬೊಜ್ಕಿರ್ ಅವರು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಪ್ರಧಾನಿ ಮೋದಿ ಅವರು ‘ಮರುಭೂಮೀಕರಣ ವಿರುದ್ಧ ಹೋರಾಟದ ವಿಶ್ವಸಂಸ್ಥೆಯ ಸಮಾವೇಶ’ದ (ಯುಎನ್‌ಸಿಸಿಡಿ) 14ನೇ ಅಧಿವೇಶನದ ಅಧ್ಯಕ್ಷರಾಗಿದ್ದಾರೆ. ಈ ಅಧಿವೇಶನಕ್ಕೆ ಮೋದಿ ಅವರು 2019ರ ಸೆಪ್ಟೆಂಬರ್‌ನಲ್ಲಿ ಚಾಲನೆ ನೀಡಿದ್ದರು.

ವಿಶ್ವಸಂಸ್ಥೆಯ ಉಪ ಪ್ರಧಾನ ಕಾರ್ಯದರ್ಶಿ ಅಮೀನಾ ಮೊಹಮ್ಮದ್‌, ಯುಎನ್‌ಸಿಸಿಡಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಇಬ್ರಾಹಿಂ ಥಾಯ್ವ್ ಸಹ ಈ ಕಾರ್ಯಕ್ರಮವನ್ನು ಉದ್ಧೇಶಿಸಿ ವಿಚಾರ ಮಂಡನೆ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT