ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್ ಕದನದ ನಂತರ ಮೋದಿ– ಷಿ ಜಿನ್‌ಪಿಂಗ್ ಮೊದಲ ಭೇಟಿ: ಸಭೆ ನಡೆಯುವುದು ಸಂದೇಹ

Last Updated 14 ಸೆಪ್ಟೆಂಬರ್ 2022, 3:00 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾ ಜೊತೆಗಿನ ಭಾರತದ ಗಡಿ ವಿವಾದ ನಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿದ್ದಾರೆ.

ಉಜ್ಬೇಕಿಸ್ತಾನದ ಐತಿಹಾಸಿಕ ನಗರಿಸಮರ್ಕಂಡ್‌ನಲ್ಲಿ ಇಂದಿನಿಂದ ಮೂರು ದಿನ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) 22ನೇ ಶೃಂಗಸಭೆಯಲ್ಲಿ ಈ ಇಬ್ಬರೂ ನಾಯಕರು ಭಾಗವಹಿಸುತ್ತಿದ್ದಾರೆ.

2020 ರಲ್ಲಿಲಡಾಖ್‌ನಲ್ಲಿ ದೊಡ್ಡ ಸ್ವರೂಪದಲ್ಲಿ ಆರಂಭವಾದ ಚೀನಾ ಹಾಗೂ ಭಾರತ ಗಡಿ ವಿವಾದದ ನಂತರ ಉಭಯ ದೇಶಗಳ ಸಂಬಂಧಗಳಲ್ಲಿ ಸಾಕಷ್ಟು ಬಿರುಕು ಮೂಡಿತ್ತು.

ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸೆ.15-16 ರಂದು ಉಜ್ಬೇಕಿಸ್ತಾನ್‌ಗೆ ಭೇಟಿ ನೀಡಲಿದ್ದು, ರಷ್ಯಾ, ಇರಾನ್,ಉಜ್ಬೇಕಿಸ್ತಾನ್ ಅಧ್ಯಕ್ಷರ ಜೊತೆ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ. ಪಾಕಿಸ್ತಾನ ಪ್ರಧಾನಿಯನ್ನೂಭೇಟಿಯಾಗುವ ಸಂಭವ ಇದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಆದರೆ,ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ದ್ವಿಪಕ್ಷೀಯ ಮಾತುಕತೆ ನಡೆಸುವ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಹೀಗಾಗಿ ಸಭೆ ನಡೆಯುವುದು ಸಂದೇಹವಿದೆ ಎಂದು ಕೆಲ ವರದಿಗಳು ಹೇಳಿವೆ.

ಬ್ರಾಸಿಲ್ಲಾದಲ್ಲಿ 2019 ನವೆಂಬರ್‌ನಲ್ಲಿ ನಡೆದಿದ್ದ ಬ್ರಿಕ್ಸ್ ಸಮಾವೇಶದಲ್ಲಿ ಷಿ–ಜಿನ್‌ಪಿಂಗ್ ಹಾಗೂ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಆ ನಂತರು ಉಭಯ ನಾಯಕರು ಮುಖಾಮುಖಿ ಭೇಟಿಯಾಗಿರಲಿಲ್ಲ.

ಇನ್ನು, ಷಿ ಜಿನ್‌ಪಿಂಗ್ ಅವರು ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ರಷ್ಯಾ ಉಕ್ರೇನ್ ಮೇಲೆ ಅತಿಕ್ರಮಣ ಮಾಡಿದ ನಂತರ ರಷ್ಯಾ–ಚೀನಾ ಜಂಟಿ ಸಮರಾಭ್ಯಾಸ ಕೂಡ ನಡೆಸುತ್ತಿರುವುದು ಜಾಗತಿಕ ನಾಯಕರ ಆತಂಕಕ್ಕೆ ಕಾರಣವಾಗಿದೆ.

’ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾಗವಹಿಸುವ ನಿರೀಕ್ಷೆಯಿದೆ. ಪುಟಿನ್ ಮತ್ತು ಷಿ ಅವರು ಈ ಸಭೆಯಲ್ಲಿ ಭೇಟಿಯಾಗಲಿದ್ದಾರೆ‘ ಎಂದುರಷ್ಯಾ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT