ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳಲು ಇಮ್ರಾನ್‌ಗೆ ಪ್ರಧಾನಿ ಮೋದಿ ಶುಭ ಹಾರೈಕೆ

Last Updated 21 ಮಾರ್ಚ್ 2021, 2:12 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬೇಗನೇ ಗುಣಮುಖರಾಗುವಂತೆ ಭಾರತ ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, ಕೊರೊನಾ ಸೋಂಕಿನಿಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶೀಘ್ರವಾಗಿ ಚೇತರಿಸಿಕೊಳ್ಳಲು ಶುಭ ಹಾರೈಸುವುದಾಗಿ ತಿಳಿಸಿದ್ದಾರೆ.

67 ವರ್ಷದ ಇಮ್ರಾನ್ ಖಾನ್ ಶುಕ್ರವಾರದಂದು ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡಿದ್ದರು. ಬಳಿಕ ಕೋವಿಡ್-19 ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಆಗಿರುವುದು ಕಂಡುಬಂದಿದೆ.

ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಕೋವಿಡ್ ಲಸಿಕೆ ಅಭಿಯಾನದ ಭಾಗವಾಗಿ ಇಮ್ರಾನ್ ಖಾನ್, ಚೀನಾದ ಸಿನೊಫಾರ್ಮ್ ಲಸಿಕೆಯನ್ನು ಹಾಕಿಸಿಕೊಂಡಿದ್ದರು. ಈಗ ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್‌ಗೊಳಗಾಗಿದ್ದಾರೆ.

ಈ ಮೊದಲು ಬುಧವಾರದಂದು ಹೇಳಿಕೆ ನೀಡಿದ್ದ ಇಮ್ರಾನ್ ಖಾನ್, ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವ ಮೂಲಕ ದ್ವಿಪಕ್ಷೀಯ ಸಂಬಂಧವನ್ನು ಸುಧಾರಿಸಲು ಭಾರತವು ಮೊದಲ ಹೆಜ್ಜೆ ಇಡಬೇಕಾಗುತ್ತದೆ ಎಂದು ಹೇಳಿದ್ದರು.

ಇಮ್ರಾನ್ ಪತ್ನಿಗೂ ತಗುಲಿದ ಕೊರೊನಾವೈರಸ್...
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಷ್ರಾ ಬೀಬಿ ಅವರಿಗೂ ಕೊರೊನಾವೈರಸ್ ಸೋಂಕು ತಗುಲಿದೆ. ಇಮ್ರಾನ್ ಖಾನ್‌ಗೆ ಕೋವಿಡ್ ಪಾಸಿಟಿವ್ ಆದ ಕೆಲವೇ ಗಂಟೆಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ಬುಷ್ರಾ ಬೀಬಿ ಅವರಲ್ಲೂ ಕೊರೊನಾವೈರಸ್ ಪತ್ತೆ ಹಚ್ಚಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT