ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ವಿರುದ್ಧ ಕೊಲೆ, ಭಯೋತ್ಪಾದನೆ ಪ್ರಕರಣ 

Last Updated 9 ಮಾರ್ಚ್ 2023, 14:49 IST
ಅಕ್ಷರ ಗಾತ್ರ

ಲಾಹೋರ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹಾಗೂ ಇತರ 400 ಮಂದಿಯ ವಿರುದ್ಧ ಲಾಹೋರ್‌ ಪೊಲೀಸರು ಗುರುವಾರ ಕೊಲೆ ಹಾಗೂ ಭಯೋತ್ಪಾದನೆಯ ಪ್ರಕರಣ ದಾಖಲಿಸಿದ್ದಾರೆ.

ಇಮ್ರಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್‌–ಇ–ಇನ್ಸಾಫ್‌ (ಪಿಟಿಐ) ಪಕ್ಷದ ರ‍್ಯಾಲಿ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘಟನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟರೆ, ಹಲವರು ಗಾಯಗೊಂಡಿದ್ದರು.

ಪಾಕಿಸ್ತಾನ ಮುಸ್ಲಿಂ ಲೀಗ್‌–ನವಾಜ್‌ (ಪಿಎಂಎಲ್‌–ಎನ್‌) ನೇತೃತ್ವದ ಸಮ್ಮಿಶ್ರ ಸರ್ಕಾರವು ತನ್ನ 11 ತಿಂಗಳ ಆಡಳಿತಾವಧಿಯಲ್ಲಿ ಇಮ್ರಾನ್‌ ಮೇಲೆ ದಾಖಲಿಸಿರುವ 80ನೇ ಪ್ರಕರಣ ಇದಾಗಿದೆ.

ರ‍್ಯಾಲಿ, ಪ್ರತಿಭಟನೆಗಳ ಮೇಲೆ ಪಾಕಿಸ್ತಾನ ಸರ್ಕಾರ ಹೇರಿರುವ ನಿಷೇಧ ಧಿಕ್ಕರಿಸಿ ಇಮ್ರಾನ್‌ ಬೆಂಬಲಿಗರು ಅವರ ನಿವಾಸದ ಬಳಿ ಜಮಾಯಿಸಿದ್ದರು. ಅವರನ್ನು ಚದುರಿಸಲು ಪೊಲೀಸರು ಬುಧವಾರ ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಸಿಡಿಸಿದ್ದರು. ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಪಿಟಿಐ ಕಾರ್ಯಕರ್ತ ಅಲಿ ಬಿಲಾಲ್‌ ಎಂಬುವರು ಮೃತಪಟ್ಟಿದ್ದರು. 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

‘ಪಿಟಿಐ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರಿಂದಾಗಿ 11 ಮಂದಿ ಪೊಲೀಸ್‌ ಅಧಿಕಾರಿಗಳು ಗಾಯಗೊಂಡಿದ್ದರು’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

‘ಪಕ್ಷದ ಕಾರ್ಯಕರ್ತನನ್ನು ಹತ್ಯೆ ಮಾಡಿರುವ ಪೊಲೀಸ್‌ ಸಿಬ್ಬಂದಿ ಹಾಗೂ ಅದಕ್ಕೆ ಕುಮ್ಮಕ್ಕು ನೀಡಿದ್ದ ಉನ್ನತ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವುದನ್ನು ಬಿಟ್ಟು, ಇಮ್ರಾನ್‌ ಹಾಗೂ ಇತರ 400 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಪಿಟಿಐ ನಾಯಕ ಫವಾದ್‌ ಚೌಧರಿ ಕಿಡಿಕಾರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT