ಬಾಂಗ್ಲಾದೇಶ: ದೋಣಿ ಅಪಘಾತದಲ್ಲಿ 25 ಮಂದಿ ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ಸೋಮವಾರ ದೋಣಿಗಳೆರಡು ಮುಖಾಮುಖಿ ಡಿಕ್ಕಿಯಾಗಿ 25 ಮಂದಿ ಮೃತಪಟ್ಟಿದ್ದಾರೆ.
ರಕ್ಷಣಾ ಕಾರ್ಯಾಚರಣೆ ವೇಳೆ 25 ಮೃತದೇಹಗಳು ಪತ್ತೆಯಾಗಿದ್ದು, ಐವರನ್ನು ರಕ್ಷಿಸಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಶಿಬ್ಚಾರ್ ಪಟ್ಟಣದ ಸಮೀಪವಿರುವ ಪದ್ಮಾ ನದಿಯಲ್ಲಿ ಈ ಘಟನೆ ನಡೆದಿದೆ. ಸುಮಾರು 30 ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ದೋಣಿ ಮತ್ತು ಮರಳು ಸಾಗಿಸುವ ದೋಣಿ ನಡುವೆ ಡಿಕ್ಕಿ ಸಂಭವಿಸಿದೆ.
ಹಲವು ಮಂದಿ ನಾಪತ್ತೆಯಾಗಿರುವ ಶಂಕೆಯಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.