ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನಲ್ಲಿ ಪಿಟಿಐ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ

Last Updated 8 ಮಾರ್ಚ್ 2023, 13:47 IST
ಅಕ್ಷರ ಗಾತ್ರ

ಲಾಹೋರ್‌ (ಪಿಟಿಐ): ರ‍್ಯಾಲಿ, ಪ್ರತಿಭಟನೆಗಳ ಮೇಲೆ ಪಾಕಿಸ್ತಾನ ಸರ್ಕಾರ ಹೇರಿರುವ ನಿಷೇಧ ಧಿಕ್ಕರಿಸಿ ಉಚ್ಚಾಟಿತ ಪ್ರಧಾನಿ ಇಮ್ರಾನ್ ಖಾನ್ ನಿವಾಸದ ಬಳಿ ಸೇರಿದ್ದ ಅವರ ಬೆಂಬಲಿಗರನ್ನು ಚದುರಿಸಲು ಪೊಲೀಸರು ಬುಧವಾರ ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಸಿಡಿಸಿದರು.

ಪ್ರಾಂತೀಯ ರಾಜಧಾನಿಯಲ್ಲಿ ಸಾರ್ವಜನಿಕ ಕೂಟಗಳನ್ನು ಸೆಕ್ಷನ್ 144ರ ಅಡಿಯಲ್ಲಿ ನಿಷೇಧಿಸಲಾಗಿದೆ ಎನ್ನುವ ವರದಿ ಹೊರಬಿದ್ದ ನಂತರ, ‘ಶಾಂತವಾಗಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇದು ಫ್ಯಾಸಿಸ್ಟ್‌ ಕ್ರಮ. ಇಮ್ರಾನ್‌ ಖಾನ್ ಅವರನ್ನು ಬಂಧಿಸಲು ಹಾದಿ ಸುಗಮ ಮಾಡಿಕೊಳ್ಳುತ್ತಿರುವ ಪ್ರಯತ್ನವಿದು’ ಎಂದು ಖಾನ್‌ ಅವರ ಪಾಕಿಸ್ತಾನ್‌ ತೆಹ್ರೀಕ್-ಇ-ಇನ್ಸಾಫ್ ( ಪಿಟಿಐ) ದೂರಿದೆ.

ಮಹಿಳೆಯರು ಸೇರಿ ಪಿಟಿಐ ಕಾರ್ಯಕರ್ತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಮತ್ತು ಲಾಠಿ ಪ್ರಹಾರ ನಡೆಸಿದರು. ಪ್ರತಿರೋಧ ತೋರಿದ ಕಾರ್ಯಕರ್ತರನ್ನು ಪೊಲೀಸ್‌ ವಾಹನಗಳಿಗೆ ಹತ್ತಿಸಿಕೊಂಡರು. ಅಲ್ಲದೆ, ಪೊಲೀಸರು ಪಿಟಿಐ ಕಾರ್ಯಕರ್ತರಿಗೆ ಸೇರಿದ ಕಾರುಗಳು, ಇತರ ವಾಹನಗಳನ್ನು ಜಖಂಗೊಳಿಸಿದರು ಎಂದು ಪಕ್ಷದ ಹಿರಿಯ ನಾಯಕ ಶಿರೀನ್ ಮಝಾರಿ ಹೇಳಿದ್ದಾರೆ.

ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೃಹ ಸಚಿವ ರಾಣಾ ಸನಾವುಲ್ಲಾ, ‘ಭಯೋತ್ಪಾದಕ ದಾಳಿ ನಡೆಯುವ ಎಚ್ಚರಿಕೆಯನ್ನು ಗುಪ್ತಚರ ಸಂಸ್ಥೆಗಳು ನೀಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ, ಪಂಜಾಬ್‌ ಪ್ರಾಂತ್ಯದಲ್ಲಿ ಸಾರ್ವಜನಿಕ ಸಮಾರಂಭಗಳು ಮತ್ತು ರ‍್ಯಾಲಿಗಳನ್ನು ನಿಷೇಧಿಸಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT