ಬುಧವಾರ, ಜನವರಿ 19, 2022
28 °C

ಡಿ.16ರ ಬಾಂಗ್ಲಾ ವಿಮೋಚನಾ ದಿನಾಚರಣೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿ

ಪಿಟಿಐ Updated:

ಅಕ್ಷರ ಗಾತ್ರ : | |

ಢಾಕಾ: ’ಬಾಂಗ್ಲಾ ವಿಮೋಚನಾ ದಿನಾಚರಣೆಯಲ್ಲಿ (ವಿಜಯ್ ದಿವಸ್‌) ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಿಸೆಂಬರ್ 16ರಂದು ಢಾಕಾಕ್ಕೆ ಭೇಟಿ ನೀಡಲಿದ್ದಾರೆ’ ಎಂದು ಬಾಂಗ್ಲಾದೇಶ ವಿದೇಶಾಂಗ ಸಚಿವರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.‌

’ವಿಜಯ ದಿವಸ್‌’ ಕಾರ್ಯಕ್ರಮದ ಹೊರತಾಗಿಯೂ ರಾಷ್ಟ್ರಪತಿಯವರು ಇತರ ಪ್ರಮುಖ ಕಾರ್ಯಗಳಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ಬಾಂಗ್ಲಾದೇಶದ ಅಧ್ಯಕ್ಷ ಅಬ್ದುಲ್ ಹಮೀದ್ ಅವರ ಆಹ್ವಾನದ ಮೇರೆಗೆ ರಾಮನಾಥ್ ಕೋವಿಂದ್ ಅವರು ಡಿಸೆಂಬರ್ 16 ಮತ್ತು 17 ರಂದು ಈ ಭೇಟಿ ನೀಡಲಿದ್ದಾರೆ ಎಂದು ಸ್ಥಳೀಯ ’ಡೈಲಿ ಸ್ಟಾರ್‘ ಪತ್ರಿಕೆ ಭಾನುವಾರ ವರದಿ ಮಾಡಿದೆ. 

ಡಿ.6ರಂದು ’ಮೈತ್ರಿ ದಿವಸ’ ಮತ್ತು ಡಿ.16ರಂದು ಬಾಂಗ್ಲಾದೇಶದ ವಿಜಯ ದಿವಸ’ ಎಂಬ ಎರಡು  ಬೃಹತ್ ಕಾರ್ಯಕ್ರಮಗಳನ್ನು ನಡೆಸಲು ಬಾಂಗ್ಲಾದೇಶ ಮತ್ತು ಭಾರತ ದೇಶಗಳು ಜಂಟಿಯಾಗಿ ಸಿದ್ಧತೆ ನಡೆಸುತ್ತಿವೆ ಎಂದು ’ಢಾಕಾ ಟ್ರಿಬ್ಯೂನ್‌’ ಪತ್ರಿಕೆ ವರದಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು