ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಸರ್ಕಾರ ರಚನೆಗೆ ವಿಕ್ರಮಸಿಂಘೆ ಕರೆ

ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದ ಶ್ರೀಲಂಕಾ ಅಧ್ಯಕ್ಷ
Last Updated 30 ಜುಲೈ 2022, 11:25 IST
ಅಕ್ಷರ ಗಾತ್ರ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾದ ಪುನಃಶ್ಚೇತನ ಉದ್ದೇಶದಿಂದ ಸರ್ವಪಕ್ಷಗಳ ರಾಷ್ಟ್ರೀಯ ಸರ್ಕಾರ ರಚನೆಗೆ ಮುಂದಾಗುವಂತೆ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಅವರು ಸಂಸತ್‌ ಸದಸ್ಯರಿಗೆ ಪತ್ರ ಬರೆದಿದ್ದಾರೆ.

‘ಆರ್ಥಿಕ ಬಿಕ್ಕಟ್ಟಿನಿಂದ ನಿರ್ಮಾಣವಾಗಿರುವ ಸಾಮಾಜಿಕ ಮತ್ತು ರಾಜಕೀಯ ಕ್ಷೋಬೆಗಳನ್ನು ಬಗೆಹರಿಸಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಆರ್ಥಿಕ ಸ್ಥಿರತೆಗೆ ವ್ಯವಸ್ಥಿತ ಆರ್ಥಿಕ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಾಗಿದೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಸಹಭಾಗಿತ್ವ ಅತ್ಯಗತ್ಯ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಅವರು, ಸಂವಿಧಾನದ 19ನೇ ತಿದ್ದುಪಡಿಯನ್ನು ಮತ್ತೆ ಜಾರಿ ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ. 2019ರಲ್ಲಿ ಗೊಟಬಯ ರಾಜಪಕ್ಸ ಅವರು 19ಎ ತಿದ್ದುಪಡಿಯನ್ನು ರದ್ದುಗೊಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT