ಶನಿವಾರ, ಮೇ 8, 2021
18 °C

ಬ್ರಿಟನ್ ರಾಣಿ ಎಲಿಜಬೆತ್ ಪತಿ, ರಾಜ ಫಿಲಿಪ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್: ರಾಣಿ ಎಲಿಜಬೆತ್ II ಅವರ ಪತಿ ರಾಜ ಫಿಲಿಪ್ 99 ನೇ ವಯಸ್ಸಿನಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಪ್ರಕಟಣೆ ತಿಳಿಸಿದೆ.

99 ವರ್ಷದ ರಾಜ ಫಿಲಿಪ್ ಅವರು ಇತ್ತೀಚೆಗಷ್ಚೇ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ಪ್ರಕ್ರಿಯೆಗೆ ಒಳಗಾಗಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತನ್ನ ಪ್ರೀತಿಯ ಪತಿ, ಡ್ಯೂಕ್ ಆಫ್ ಎಡಿನ್‌ಬರ್ಗ್- ಪ್ರಿನ್ಸ್ ಫಿಲಿಪ್ ಅವರು ಮೃತಪಟ್ಟಿರುವುದಾಗಿ ಘೋಷಿಸಿರುವ ರಾಣಿ ಎಲಿಜಬೆತ್, ಅವರ ಸಾವಿಗೆ ತೀವ್ರ ದುಃಖವಾಗಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದೆ.

'ಅವರ ಪತಿ, ರಾಜ ಫಿಲಿಪ್ ಅವರು ಇಂದು ಬೆಳಗ್ಗೆ ವಿಂಡ್ಸರ್ ಕ್ಯಾಸಲ್‌ನಲ್ಲಿ ನಿಧನರಾದರು' ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು