ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದಲ್ಲಿ ಪ್ರತಿಭಟನೆ, 21 ಮಂದಿ ಬಂಧನ

Last Updated 20 ಜೂನ್ 2022, 11:03 IST
ಅಕ್ಷರ ಗಾತ್ರ

ಕೊಲಂಬೊ: ದೇಶದ ಆರ್ಥಿಕತೆಯನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫಲವಾಗಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನಕಾರರು, ಅಧ್ಯಕ್ಷರ ಸಚಿವಾಲಯದ ಎಲ್ಲಾ ಪ್ರವೇಶದ್ವಾರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸೋಮವಾರ ಬೌದ್ಧ ಧರ್ಮದ ಗುರು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೊಟಬಯ ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಸೋಮವಾರ 73ನೇ ದಿನಕ್ಕೆ ಕಾಲಿಟ್ಟಿದೆ.

ಇನ್ನು ಭಾನುವಾರ ರಾತ್ರಿ ಪ್ರತಿಭಟನಕಾರರು ಅಧ್ಯಕ್ಷರ ಸಚಿವಾಲಯದ ಎರಡು ಪ್ರವೇಶದ್ವಾರಗಳನ್ನು ಬಂದ್ ಮಾಡಿದರು. ಆದರೆ, ಅಂತರರಾಷ್ಟ್ರೀಯ ಹಣಕಾಸು ನಿಧಿಯ ತಂಡವು ದೇಶದ ಆರ್ಥಿಕ ಇಲಾಖೆಯ ಕಚೇರಿಗೆ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಎರಡೂ ಪ್ರವೇಶ ದ್ವಾರಗಳಲ್ಲಿ ಪ್ರತಿಭಟನೆ ಕೈಗೊಂಡಿದ್ದವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT