ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಕಾದಲ್ಲಿ ಭುಗಿಲೆದ್ದ ಆಕ್ರೋಶ: ಸೇನಾ ಸಿಬ್ಬಂದಿಯೊಂದಿಗೆ ಪ್ರತಿಭಟನಾಕಾರರ ವಾಗ್ವಾದ

ಅಕ್ಷರ ಗಾತ್ರ

ಕೊಲಂಬೊ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದದಲ್ಲಿ ಜನರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಕೊಲಂಬೊ ನಗರದಲ್ಲಿ ಬುಧವಾರ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಪ್ರಧಾನಿ ಕಚೇರಿಯತ್ತ ಪ್ರತಿಭಟನಾಕಾರರು ಮುಖಮಾಡಿದ್ದಾರೆ.

ಪ್ರಧಾನಿ ನಿವಾಸದ ಹೊರಗೆ ನಿಯೋಜಿಸಲಾದ ಸೇನಾ ಸಿಬ್ಬಂದಿಯೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ರಾನಿಲ್‌ ವಿಕ್ರಮಸಿಂಘೆ ಅವರೊಬ್ಬ ವಿಫಲ ಪ್ರಧಾನಿ ಎಂದು ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದಾರೆ.

ಜನರ ಆಕ್ರೋಶಕ್ಕೆ ಮಣಿದಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಶನಿವಾರ, ಸಾವಿರಾರು ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸಗಳಿಗೆ ಮುತ್ತಿಗೆ ಹಾಕಿದ್ದರು.

ಶ್ರೀಲಂಕಾದ ಸಂಸತ್, ಜುಲೈ 20ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT