ಶುಕ್ರವಾರ, ಡಿಸೆಂಬರ್ 3, 2021
26 °C

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ಶಿಕ್ಷಣ ತಜ್ಞರ ಖಂಡನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಢಾಕಾ: ಹಿಂದೂ ಸಮುದಾಯದ ಮೇಲೆ ಗುಂಪು ಹಲ್ಲೆ ನಡೆಸಿರುವುದು ಮತ್ತು ದುರ್ಗಾ ಪೂಜೆ ಹಬ್ಬದ ಸಮಯದಲ್ಲಿ ದೇವಸ್ಥಾನಗಳು ಹಾಗೂ ವಿಗ್ರಹಗಳನ್ನು ಧ್ವಂಸಗೊಳಿಸುವುದನ್ನು ದೇಶದಾದ್ಯಂತ ಪ್ರತಿಭಟನಾಕಾರರು ಮತ್ತು ಶಿಕ್ಷಣ ತಜ್ಞರು ಖಂಡಿಸಿದ್ದಾರೆ.

ಬಾಂಗ್ಲಾದೇಶ ಸರ್ಕಾರವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಖಾತ್ರಿಪಡಿಸಲು ಹೊಸ ಕಾನೂನು ಜಾರಿಗೊಳಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.

ಹಿಂದೂ ಸಮುದಾಯದ ಮೇಲಿನ ದಾಳಿ ಖಂಡಿಸಿ, ದೇಶದಾದ್ಯಂತ ಮಂಗಳವಾರ ಆರನೇ ದಿನ ಪ್ರತಿಭಟನೆಗಳನ್ನು ನಡೆಸಲಾಗಿದೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ಬುಧವಾರ ವರದಿ ಮಾಡಿದೆ.

ಢಾಕಾ ವಿಶ್ವವಿದ್ಯಾಲಯದ ಶಿಕ್ಷಕರ ಸಂಘವು (ಡಿಯುಟಿಎ) ದೇಶದಾದ್ಯಂತ ಹಿಂದೂ ದೇವಸ್ಥಾನಗಳು ಮತ್ತು ದುರ್ಗಾ ಪೂಜಾ ಸ್ಥಳಗಳ ಮೇಲೆ ದಾಳಿ ನಡೆಸಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದೆ.

ವಿವಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ದಾಳಿಗಳನ್ನು ಖಂಡಿಸಿ ‘ದೇಖ್ತೆ ಕಿ ಪಾವೋ, ಪರ್ಚೆ ಬಾಂಗ್ಲಾ’ (ಬಾಂಗ್ಲಾ ಉರಿಯುತ್ತಿರುವುದನ್ನು ನೀವು ನೋಡುತ್ತೀರಾ?) ಎಂಬ ಬೀದಿ ನಾಟಕ ಪ್ರದರ್ಶಿಸಿದರು.

ಕವಿಗಳು, ಸಾಹಿತಿಗಳು, ಕಲಾವಿದರು ಮತ್ತು ಪತ್ರಕರ್ತರು ಕೋಮು ಭಯೋತ್ಪಾದನೆ ಖಂಡಿಸಿ ಶಹಬಾಗ್‌ನ ರಾಷ್ಟ್ರೀಯ ವಸ್ತುಸಂಗ್ರಹಾಲಯದ ಮುಂದೆ ರ‍್ಯಾಲಿ ನಡೆಸಿದರು.

ದುರ್ಗಾ ಪೂಜೆ ಆಚರಣೆಯ ಸಮಯದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಧಾರ್ಮಿಕ ನಿಂದನೆಯ ಆರೋಪ ಕೇಳಿ ಬಂದ ನಂತರ, ಬಾಂಗ್ಲಾದೇಶದಲ್ಲಿ ಕಳೆದ ಬುಧವಾರದಿಂದ ಹಿಂದೂಗಳು ಮತ್ತು ಹಿಂದೂ ದೇವಾಲಯಗಳ ಮೇಲೆ ದಾಳಿಗಳು ತೀವ್ರಗೊಂಡಿವೆ.

ಭಾನುವಾರ ತಡರಾತ್ರಿ ಬಾಂಗ್ಲಾದೇಶದಲ್ಲಿ ಒಂದು ಗುಂಪು 66 ಮನೆಗಳಿಗೆ ಹಾನಿ ಮಾಡಿ, ಕನಿಷ್ಠ 20 ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು