ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾ: ಕಾರ್ಮಿಕ ಕಾನೂನು ವಿರೋಧಿಸಿ ಪ್ರತಿಭಟನೆ

Last Updated 8 ಅಕ್ಟೋಬರ್ 2020, 9:11 IST
ಅಕ್ಷರ ಗಾತ್ರ

ಜಕಾರ್ತಾ: ಇಂಡೊನೇಷ್ಯಾದಲ್ಲಿನ ಹೊಸ ಕಾರ್ಮಿಕ ಕಾನೂನುಗಳನ್ನು ವಿರೋಧಿಸಿ ಸಾವಿರಾರು ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಗುರುವಾರವೂ ದೇಶದಾದ್ಯಂತ ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಿದರು.

ಹೊಸ ಕಾನೂನು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುತ್ತದೆ ಮತ್ತು ಪರಿಸರಕ್ಕೂ ಧಕ್ಕೆ ಉಂಟು ಮಾಡುತ್ತದೆ ಎಂದು ಪ್ರತಿಭಟನಕಾರರು ದೂರಿದರು.

ಉದ್ಯೋಗ ಸೃಷ್ಟಿ ಕಾನೂನಿಗೆ ಸೋಮವಾರ ಸಂಸತ್‌ ಅನುಮೋದನೆ ನೀಡಿತ್ತು. ಈ ಕಾನೂನು ಇಂಡೊನೇಷ್ಯಾದಲ್ಲಿನ ಕಾರ್ಮಿಕರ ಸೌಲಭ್ಯಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆಯಲ್ಲಿ ಹಲವು ಬದಲಾವಣೆಗಳನ್ನು ತರಲಿದೆ. ದೇಶದಲ್ಲಿ ಹೂಡಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.

ಈ ಕಾನೂನುಗಳಿಂದ ಹೊರಗುತ್ತಿಗೆಗೆ ಹೆಚ್ಚು ಅವಕಾಶ ದೊರೆಯಲಿದೆ. ಜತೆಗೆ, ಕೆಲಸದ ಒತ್ತಡವೂ ಹೆಚ್ಚಲಿದೆ. ವಾರದ ವೇತನದ ಬದಲು ಗಂಟೆಗಳ ಲೆಕ್ಕದಲ್ಲಿ ವೇತನ ನೀಡುವ ವ್ಯವಸ್ಥೆ ಜಾರಿಯಾಗಲಿದೆ ಎಂದು ಕಾರ್ಮಿಕರ ಸಂಘಟನೆಗಳ ಮುಖಂಡರು ದೂರಿದ್ದಾರೆ.

ಸಂಸತ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ 200 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದರು. ಕಳೆದ ಎರಡು ದಿನಗಳಲ್ಲಿ ಸುಮಾರು 600 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT