ಬುಧವಾರ, ಏಪ್ರಿಲ್ 14, 2021
25 °C

ಮ್ಯಾನ್ಮಾರ್‌ನಲ್ಲಿ ಮುಂದುವರಿದ ಪ್ರತಿಭಟನೆ; ಅಶ್ರುವಾಯು ಪ್ರಯೋಗ

ಎಪಿ Updated:

ಅಕ್ಷರ ಗಾತ್ರ : | |

Prajavani

ಯಾಂಗೊನ್‌: ಮ್ಯಾನ್ಮಾರ್‌ ಮಿಲಿಟರಿ ಆಡಳಿತ ವಿರೋಧಿಸಿ ಶನಿವಾರವೂ ಪ್ರತಿಭಟನೆ ಮುಂದುವರಿದಿದೆ. ಪ್ರತಿಭಟನಕಾರರನ್ನು ಚದುರಿಸಲು ಸೇನೆಯು ಅಶ್ರುವಾಯು ಪ್ರಯೋಗಿಸಿದೆ.

ಯಾಂಗೊನ್‌ನಲ್ಲಿ ಶನಿವಾರ ಬೆಳಿಗ್ಗೆ ಸೇರಿದ್ದ ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಪಡೆಗಳು ‘ಸ್ಟನ್’ ಗ್ರೆನೇಡ್‌ಗಳು ಮತ್ತು ಅಶ್ರುವಾಯು ಪ್ರಯೋಗಿಸಿವೆ.

ಮ್ಯಾನ್ಮಾರ್‌ನ ದವೈ, ಕ್ಯೈಕ್ಟೊ, ಮೈಂಗ್ಯಾನ್‌ ಮತ್ತು ಮೈಟ್ಕಿನಾದಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳು ಮೇಲೂ ಪೊಲೀಸರು ಅಶ್ರುವಾಯುವನ್ನು ಪ್ರಯೋಗಿಸಿದ್ದಾರೆ. ಲೊಯಿಕಾವ್‌ನಲ್ಲಿ ಒಬ್ಬ ಪ್ರತಿಭಟನಾಕಾರರು ಸಾವಿಗೀಡಾಗಿದ್ದಾರೆ.

ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಇದುವರೆಗೆ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.  ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ದೇಶದಾದ್ಯಂತ ನಗರ ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆಗಳು ವ್ಯಾಪಕವಾಗಿ ನಡೆಯತ್ತಿವೆ.

ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸಲು ವಿಶ್ವಸಂಸ್ಥೆಯ ಭದ್ರತಾ ಸಮಿತಿಯು ಕ್ರಮಕೈಗೊಳ್ಳಬೇಕು ಎಂದು ಮ್ಯಾನ್ಮಾರ್‌ನ ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಕ್ರಿಸ್ಟೀನ್ ಸ್ಕ್ರಾನರ್ ಬರ್ಗೆನರ್ ಒತ್ತಾಯಿಸಿದ್ದಾರೆ.

 ‘ಸೇನೆಯನ್ನು ಕ್ರಮಗಳನ್ನು ನಾವು ಖಂಡಿಸಬೇಕು. ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಮರುಸ್ಥಾಪಿಸಲು ಮುಂದಾಗಬೇಕು’ ಎಂದು ಅವರು ಹೇಳಿದ್ದಾರೆ.

‘ಸೇನಾ ಆಡಳಿತಕ್ಕೆ ಅಂತರರಾಷ್ಟ್ರೀಯ ಸಮುದಾಯ ಮಾನ್ಯತೆ ನೀಡಬಾರದು’ ಎಂದು ಅವರು ಒತ್ತಾಯಿಸಿದ್ದಾರೆ.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು