ಮಾಸ್ಕೊ: ಇದೇ 15, 16ರಂದು ಉಜ್ಬೇಕಿಸ್ತಾನದಲ್ಲಿ ನಡೆಯಲಿರುವಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) 22ನೇ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭೇಟಿಯಾಗಲಿದ್ದಾರೆ. ಈ ವೇಳೆ ಉಭಯ ನಾಯಕರು ಏಷ್ಯಾ ಪೆಸಿಫಿಕ್ ಪ್ರದೇಶದ ಪರಿಸ್ಥಿತಿ, ಜಿ–20 ಮತ್ತು ವಿಶ್ವಸಂಸ್ಥೆಯೊಳಗಿನ ದ್ವಿಪಕ್ಷೀಯ ಸಹಕಾರ ಕುರಿತು ಚರ್ಚಿಸಲಿದ್ದಾರೆ ಎಂದು ಕ್ರೆಮ್ಲಿನ್ ಹೇಳಿದೆ.

ಆದರೆ, ಮೋದಿ ಮತ್ತು ಪುಟಿನ್ ಭೇಟಿಯ ಕುರಿತು ಭಾರತದ ವಿದೇಶಾಂಗ ಸಚಿವಾಲಯವು ಇನ್ನೂ ಖಚಿತ ಪಡಿಸಿಲ್ಲ.

‘ಮೋದಿ–ಪುಟಿನ್ ಭೇಟಿಯು ವಿಶೇಷ ಮಹತ್ವ ಪಡೆದಿದೆ. ಏಕೆಂದರೆ ಭಾರತವು ಇದೇ ಡಿಸೆಂಬರ್ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲಿದ್ದು, 2023ರಲ್ಲಿ ಭಾರತವುಶಾಂಘೈ ಸಹಕಾರ ಸಂಘಟನೆಯನ್ನು ಮುನ್ನಡೆಸಲಿದೆ. ಅಲ್ಲದೇ, ಜಿ 20 ರಾಷ್ಟ್ರಗಳ ಸಂಘಟನೆಯ ನೇತೃತ್ವವನ್ನೂ ವಹಿಸಲಿದೆ’ ಎಂದು ರಷ್ಯಾದ ಅಧ್ಯಕ್ಷರ ಆಪ್ತ ಸಹಾಯಕಯೂರಿ ಉಶಕೋವ್ ಅವರು ತಿಳಿಸಿದ್ದಾರೆ ಎಂದು ಟಿಎಎಸ್ಎಸ್ ನ್ಯೂಸ್ ಏಜೆನ್ಸಿಯು ತಿಳಿಸಿದೆ.

ರಷ್ಯಾ ಮತ್ತು ಭಾರತದ ನಡುವೆ ವ್ಯಾಪಾರ ವಹಿವಾಟು ಅಭಿವೃದ್ಧಿಯಾಗುತ್ತಿದ್ದು, ಉಭಯ ರಾಷ್ಟ್ರಗಳ ನಾಯಕರ ಭೇಟಿ, ಮಾತುಕತೆಯು ಸಹಜವಾಗಿಯೇ ಮಹತ್ವ ಪಡೆದುಕೊಂಡಿದೆ.

ಉಕ್ರೇನ್ ಮೇಲೆ ರಷ್ಯಾವು ದಾಳಿ ನಡೆಸಿದ ಬಳಿಕ ಫೆ. 24ರಂದು ಮೋದಿ ಅವರು ಪುಟಿನ್ ಜೊತೆಗೆ ದೂರವಾಣಿ ಮೂಲಕ ಮಾತನಾಡಿದ್ದರು.

ಎಸ್ಸಿಒ ಸಂಘಟನೆಯು ಎಂಟು ಸದಸ್ಯ ರಾಷ್ಟ್ರಗಳನ್ನೊಳಗೊಂಡ ಆರ್ಥಿಕ ಮತ್ತು ಭದ್ರತಾ ಸಂಘಟನೆಯಾಗಿದೆ. ಇದರಲ್ಲಿ ಚೀನಾ, ರಷ್ಯಾ, ಕಝಕಿಸ್ತಾನ, ಕಿರ್ಗಿಸ್ತಾನ, ತಜಕಿಸ್ತಾನ, ಉಜ್ಬೇಕಿಸ್ತಾನ, ಭಾರತ ಮತ್ತು ಪಾಕಿಸ್ತಾನಗಳು ಸದಸ್ಯ ರಾಷ್ಟ್ರಗಳಾಗಿವೆ. ಈ ಬಾರಿಯ ಶೃಂಗಸಭೆಯಲ್ಲಿ ಸದಸ್ಯ ರಾಷ್ಟ್ರಗಳ ಪ್ರಧಾನಿ, ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಚೀನಾದ ಅಧ್ಯಕ್ಷ ಹಾಗೂ ಪಾಕಿಸ್ತಾನದ ಪ್ರಧಾನಿ ಅವರೊಂದಿಗೆ ಪ್ರಧಾನಿ ಮೋದಿ ಅವರು ಮಾತುಕತೆ ನಡೆಸುವ ಬಗ್ಗೆ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.