ಗಣರಾಜ್ಯೋತ್ಸವದಂದು ಮುರ್ಮು, ಮೋದಿಗೆ ಶುಭ ಕೋರಿದ ಪುಟಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳನ್ನು ಶ್ಲಾಘಿಸಿದ್ದಾರೆ.
ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳುವಲ್ಲಿ ಭಾರತದ ಕೊಡುಗೆ ಅಪಾರ ಎಂದಿದ್ದಾರೆ.
ಆರ್ಥಿಕ, ಸಾಮಾಜಿಕ, ವೈಜ್ಞಾನಿಕ, ತಾಂತ್ರಿಕತೆ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಭಾರತ ಮೂಂಚುಣಿಯಲ್ಲಿದೆ. ದೇಶವು ಅಂತರಾಷ್ಟ್ರೀಯ ಸ್ಥಿರತೆ ಮತ್ತು ಭದ್ರತೆಯನ್ನು ಕಾಯ್ದುಕೊಂಡಿದೆ. ಪ್ರಾದೇಶಿಕ ಮತ್ತು ಜಾಗತಿಕ ಮಟ್ಟದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಗಣನೀಯ ಪಾತ್ರವಹಿಸುತ್ತಿದೆ ಎಂದರು.
ನಾವು ಎಲ್ಲಾ ಕ್ಷೇತ್ರಗಳಲ್ಲಿ ಪರಸ್ಪರ ಒಟ್ಟಿಗೆ ಕೆಲಸ ಮಾಡುವ ಮೂಲಕ ಅಭಿವೃದ್ಧಿಯತ್ತ ಸಾಗಬಹುದು. ಲಾಭದಾಯಕ ದ್ವಿಪಕ್ಷೀಯ ಸಹಕಾರದಿಂದ ನಿರಂತರ ಬೆಳವಣಿಗೆಯನ್ನು ಸಾಧಿಸಬಹುದು. ಇದರಿಂದ ರಷ್ಯಾ ಮತ್ತು ಭಾರತದ ಜನರ ಮೂಲಭೂತ ಹಿತಾಸಕ್ತಿಗಳನ್ನು ಪೊರೈಸುಲಾಗುತ್ತದೆ ಎಂದು ಪುಟಿನ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.