ಬುಧವಾರ, ನವೆಂಬರ್ 30, 2022
16 °C

ಕತಾರ್‌ನಿಂದ ಪಾಕಿಸ್ತಾನದಲ್ಲಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಪಾಕಿಸ್ತಾನದ ವಾಣಿಜ್ಯ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ 300 ಕೋಟಿ ಡಾಲರ್‌ ಹೂಡಿಕೆ ಮಾಡುವುದಾಗಿ ಕತಾರ್‌ನ ಸರ್ಕಾರಿ ಸ್ವಾಮ್ಯದ ಹೂಡಿಕೆ ಪ್ರಾಧಿಕಾರವು ಘೋಷಿಸಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ದೋಹಾದಲ್ಲಿ ಕತಾರ್‌ ದೊರೆ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಂತೆ ಈ ಘೋಷಣೆ ಹೊರಬಿದ್ದಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಈ ಹೂಡಿಕೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಸಭೆಯ ಪೂರ್ವಭಾವಿಯಾಗಿ ಶೆಹಬಾಜ್ ಷರೀಫ್ ಅವರು ಕತಾರ್‌ಗೆ ಭೇಟಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು