ಬುಧವಾರ, ಜುಲೈ 6, 2022
22 °C

ಕ್ವಾಡ್ ಶೃಂಗಸಭೆ; ಮೋದಿ– ಬೈಡನ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌ (ಪಿಟಿಐ): ಜಪಾನ್‌ನ ಟೋಕಿಯೊದಲ್ಲಿ ಮುಂದಿನ ತಿಂಗಳು ನಡೆಯಲಿರುವ ಕ್ವಾಡ್‌ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಭೇಟಿ ಮಾಡಲಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಕ್ವಾಡ್‌ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೈಡನ್‌ ಅವರು ಮೇ 20ರಿಂದ 24ರವರೆಗೆ ದಕ್ಷಿಣ ಕೊರಿಯಾ ಮತ್ತು ಜಪಾನ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸವು ಬೈಡನ್‌ ಮತ್ತು ಹ್ಯಾರಿಸ್ ಆಡಳಿತವು ತೆರೆದ ಮತ್ತು ಮುಕ್ತ ಇಂಡೋ-ಪೆಸಿಫಿಕ್‌ ಪ್ರತಿಪಾದನೆಗೆ ತೋರುತ್ತಿರುವ ಬದ್ಧತೆಯನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ
ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಬುಧವಾರ ಇಲ್ಲಿ ತಿಳಿಸಿದರು. ‘ಕ್ವಾಡ್‌ನಲ್ಲಿ ಅಮೆರಿಕದ ಜತೆಗೆ ಸದಸ್ಯ ರಾಷ್ಟ್ರಗಳಾಗಿರುವ ಭಾರತ, ಆಸ್ಟ್ರೇಲಿಯಾ, ಜಪಾನ್‌ ನಾಯಕರನ್ನೂ ಬೈಡನ್‌ ಭೇಟಿ ಮಾಡಲಿದ್ದಾರೆ’ ಎಂದು ಸಾಕಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು