ಕಠ್ಮಂಡು (ಪಿಟಿಐ): ನೇಪಾಳಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಮಚಂದ್ರ ಪೌಡೆಲ್ ಅವರು ನೇಪಾಳದ ಮೂರನೇ ಅಧ್ಯಕ್ಷರಾಗಿ ಸೋಮವಾರ ಇಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನ ‘ಶೀತಲ್ ನಿವಾಸ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ನ್ಯಾಯಮೂರ್ತಿ ಹರಿಕೃಷ್ಣ ಕರ್ಕಿ ಅವರು ಪೌಡೆಲ್ (78) ಅವರಿಗೆ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ಪುಷ್ಪ ಕಮಲ್ ದಹಲ್, ಸ್ಪೀಕರ್ ದೇವ್ ರಾಜ್ ಘಿಮಿರೆ, ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಗಣೇಶ್ ಪ್ರಸಾದ್ ತಿಮಿಲ್ಸಿನ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪೌಡೆಲ್ ಅವರು ಸಿಪಿಎನ್–ಯುಎಂಎಲ್ ಸುಭಾಶ್ ಚಂದ್ರ ನೆಂಬಾಂಗ್ ಅವರನ್ನು ಸೋಲಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.