ಶುಕ್ರವಾರ, ಡಿಸೆಂಬರ್ 9, 2022
20 °C

ನೇಪಾಳ ಸ್ಟಾರ್‌ ಕ್ರಿಕೆಟಿಗ ಸಂದೀಪ್‌ ವಿರುದ್ಧ ಅತ್ಯಾಚಾರ ಆರೋಪ: ಬಂಧನ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಕಠ್ಮಂಡು: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ, ಸ್ಟಾರ್ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರನ್ನು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.

ವಿದೇಶದಿಂದ ಆಗಮಿಸಿದ ಅವರನ್ನು ಇಲ್ಲಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸಂದೀಪ್ ಲಮಿಚಾನೆ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಈ ವೇಳೆ ಅವರು ಕೆರಿಬಿಯನ್ ಪ್ರೀಮಿಯರ್ ಆಡುತ್ತಿದ್ದರು. ಅವರು ಸ್ವದೇಶಕ್ಕೆ ಬರುತ್ತಿದಂತೆ ಪೊಲೀಸರು ಬಂಧಿಸಿದ್ದಾರೆ ಎಂದು ನೇಪಾಳ ಮಾಧ್ಯಮಗಳು ವರದಿ ಮಾಡಿವೆ.  

 17 ವರ್ಷದ ಸಂತ್ರಸ್ತೆ ಸಂದೀಪ್ ವಿರುದ್ಧ ಪೊಲೀಸರಿಗೆ ಅತ್ಯಾಚಾರದ ದೂರು ನೀಡಿದ್ದರು. ಈ ಕುರಿತು ಅಪ್ರಾಪ್ತೆಯ ಆರೋಗ್ಯ ತಪಾಸಣೆ ನಡೆಸಿ ತನಿಖೆ ಮಾಡಲಾಗಿದೆ. ಈಗ ಬಂಧಿಸಿರುವ ಸಂದೀಪ್‌ನನ್ನು ವಿಚಾರಣೆ ಮಾಡಲಾಗುವುದು ಎಂದು ಕಠ್ಮಂಡು ವ್ಯಾಲಿ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ. 

ಅತ್ಯಾಚಾರದ ದೂರು ನೀಡಿರುವ ಅಪ್ರಾಪ್ತೆಯು, ತಾನು ಲಮಿಚಾನೆ ಅವರ ಅಭಿಮಾನಿ ಎಂದು ಹೇಳಿಕೊಂಡಿದ್ದಾಳೆ. ನಾನು ಅವರೊಂದಿಗೆ ವಾಟ್ಸಾಪ್ ಮತ್ತು ಸ್ನ್ಯಾಪ್‌ಚಾಟ್ ಮೂಲಕ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾಳೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು