ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನ್ನೆಸ್ಸಿಯಲ್ಲಿ ಪ್ರವಾಹ: ನಾಲ್ವರ ಸಾವು

Last Updated 29 ಮಾರ್ಚ್ 2021, 6:27 IST
ಅಕ್ಷರ ಗಾತ್ರ

ನ್ಯಾಶ್‌ವಿಲ್ಲೆ (ಅಮೆರಿಕ): ಇಲ್ಲಿನ ಟೆನ್ನೆಸ್ಸಿಯಾದ್ಯಂತ ಭಾರಿ ಮಳೆ ಸುರಿದಿದ್ದು, ರಸ್ತೆಗಳಲ್ಲಿ ಪ್ರವಾಹ ಉಂಟಾಗಿ ಹಲವು ಮನೆ, ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿದೆ. ಪ್ರವಾಹದಿಂದ ಮೃತಪಟ್ಟ ನಾಲ್ವರ ಶವಗಳು ಭಾನುವಾರ ಪತ್ತೆಯಾಗಿವೆ. ಪ್ರವಾಹದಲ್ಲಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಶ್‌ವಿಲ್ಲೆಯಲ್ಲಿನ ರಾಷ್ಟ್ರೀಯ ಹವಾಮಾನ ಸೇವಾ ಸಂಸ್ಥೆಯು ರಾತ್ರೋರಾತ್ರಿ ಪ್ರವಾಹ ಕುರಿತ ತುರ್ತು ಪರಿಸ್ಥಿತಿ ಘೋಷಿಸಿದೆ. ಕಾರುಗಳು, ಅಪಾರ್ಟ್‌ಮೆಂಟ್‌ಗಳು ಮತ್ತು ಮನೆಗಳಿಂದ ಸುಮಾರು 130 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

2010 ರಲ್ಲಿ ಸಂಭವಿಸಿದ ಪ್ರವಾಹದಲ್ಲಿ ಟೆನ್ನೆಸ್ಸಿಯಲ್ಲಿ 21 ಜನರು ಮೃತಪಟ್ಟಿದ್ದರು. ಸಾಕಷ್ಟು ಆಸ್ತಿಪಾಸ್ತಿ ನಷ್ಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT