ಬುಧವಾರ, ಮೇ 18, 2022
28 °C

ಹೌದು, ನಾನು ಪ್ರಜ್ಞೆಗೆ ಮರಳಿದ್ದೇನೆ: ಟೀಕಾಕಾರರ ಚಳಿ ಬಿಡಿಸಿದ 'ಮಿಯಾ ಖಲೀಫಾ'

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರವಾಗಿಯೇ ಇದ್ದೇನೆ ಎಂದು ಮಾಜಿ ನೀಲಿ ಚಿತ್ರ ತಾರೆ ಮಿಯಾ ಖಲೀಫಾ ಅವರು ಶುಕ್ರವಾರ ಮತ್ತೊಮ್ಮೆ ಟ್ವೀಟ್‌ ಮಾಡಿದ್ದಾರೆ.

ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ಎರಡು ದಿನಗಳ ಹಿಂದೆ ಟ್ವೀಟ್‌ ಮಾಡಿದ್ದ ಮಿಯಾ ಖಲೀಫಾ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡಲಾಗಿತ್ತು.

'ಮಿಯಾ ಖಲೀಫಾ ಪ್ರಜ್ಞೆಗೆ ಮರಳಿದ್ದಾರೆ' ಎಂಬ ಬರಹ ಹೊಂದಿದ್ದ ಪೋಸ್ಟರ್‌ಗಳನ್ನು ಹಿಡಿದ ಗುಂಪೊಂದು ಖಲೀಫಾ ವಿರುದ್ಧ ಪ್ರತಿಭಟನೆ ನಡೆಸಿತ್ತು. ಆ ಚಿತ್ರಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದ್ದವು.

ವೈರಲ್‌ ಆಗಿರುವ ಚಿತ್ರಗಳನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಖಲೀಫಾ, 'ಹಾದು, ನಾನು ಪ್ರಜ್ಞೆಗೆ ಮರಳಿದ್ದೇನೆ. ಅಗತ್ಯವಿಲ್ಲದಿದ್ದರೂ, ನಿಮ್ಮ ಕಾಳಜಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈಗಲೂ ನಾನು ರೈತರ ಪರವಾಗಿಯೇ ಇದ್ದೇನೆ' ಎಂದು ತಿಳಿಸಿದ್ದಾರೆ.

ರೈತರು ಪ್ರತಿಭಟನೆ ಮಾಡುವ ಸ್ಥಳಗಳಲ್ಲಿ ಅಂತರ್ಜಾಲ ಕಡಿತಗೊಳಿಸಿದ್ದನ್ನು ವಿರೋಧಿಸಿ ಮಿಯಾ ಖಲೀಫಾ ಎರಡು ದಿನಗಳ ಹಿಂದೆ ಟ್ವೀಟ್‌ ಮಾಡಿದ್ದರು.

ಪ್ರತಿಭಟಿಸುತ್ತಿರುವ ರೈತರು ‘ಸಂಭಾವನೆ ಪಡೆದ ನಟರು’ ಎಂದು ಹೇಳಿದವರನ್ನು ಲೆಬನಾನ್‌–ಅಮೆರಿಕನ್‌ ನಟಿ ಮಿಯಾ ಖಲೀಫಾ ತರಾಟೆಗೆ ತೆಗೆದುಕೊಂಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದಾಗಿ ಅವರು ಹೇಳಿದ್ದರು.

ಪ್ರಸಿದ್ಧ ಪಾಪ್‌ ತಾರೆ ರಿಯಾನ್ನಾ ಮತ್ತು ಸ್ವೀಡನ್‌ನ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ ಸೇರಿದಂತೆ ಹಲವು ಖ್ಯಾತನಾಮರು ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಬೆಂಬಲಿಸಿ ಟ್ವೀಟ್‌ ಮಾಡಿದ್ದರು.

ಇವುಗಳನ್ನೂ ಓದಿ...

ರೈತರ ಪ್ರತಿಭಟನೆ ಕೇವಲ ಒಂದು ರಾಜ್ಯಕ್ಕೆ ಮಾತ್ರ ಸೀಮಿತ: ತೋಮರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು