ಟೋಕಿಯೊ: ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಅವರು ಆಡಳಿತರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ (ಎಲ್‌ಡಿಪಿ) ನಾಯಕತ್ವ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ. ಈ ಮೂಲಕ ಅವರು ಇದೇ ತಿಂಗಳ ಅಂತ್ಯದಲ್ಲಿ ಪ್ರಧಾನಿ ಸ್ಥಾನದಿಂದ ಕೆಳಗಿಳಿಯುವ ಸುಳಿವು ನೀಡಿದ್ದಾರೆ ಎಂದು ಎನ್‌ಎಚ್‌ಕೆ ಸುದ್ದಿವಾಹಿನಿ ವರದಿ ಮಾಡಿದೆ.
‘ಸೆಪ್ಟೆಂಬರ್ 29ರಂದು ಲಿಬರಲ್ ಡೆಮಾಕ್ರಟಿಕ್ ಪಕ್ಷದ ನಾಯಕತ್ವಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಭಾಗಿಯಾಗುವುದಿಲ್ಲ ಎಂಬುದಾಗಿ ಸುಗಾ ಅವರು ಪಕ್ಷದ ಕಾರ್ಯನಿರ್ವಾಹಕರಿಗೆ ತಿಳಿಸಿದ್ದಾರೆ’ ಎಂದು ವರದಿ ಹೇಳಿದೆ.
ಸಂಸತ್ತಿನಲ್ಲಿ ಪಕ್ಷಕ್ಕೆ ಬಹುಮತವಿದೆ. ಹಾಗಾಗಿ ಎಲ್‌ಡಿಪಿಯ ಮುಖ್ಯಸ್ಥನಾಗಿ ಆಯ್ಕೆಯಾಗಲಿರುವ ವ್ಯಕ್ತಿಯೇ ಜಪಾನ್‌ನ ಹೊಸ ಪ್ರಧಾನಿಯಾಗಲಿದ್ದಾರೆ ಎಂದು ಲೆಕ್ಕಚಾರ ಹಾಕಲಾಗಿದೆ.
ಯೋಶಿಹಿದೆ ಸುಗಾ ಅವರು ಕೋವಿಡ್ ವಿರುದ್ಧ ಮಂದಗತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಹಾಗೂ ಸಾರ್ವಜನಿಕರ ಆರೋಗ್ಯವನ್ನು ಕಡೆಗಣಿಸಿ, ಪಿಡುಗಿನ ನಡುವೆಯೂ ಒಲಿಂಪಿಕ್ಸ್ ಆಯೋಜಿಸಿದ್ದರು ಎಂಬ ಟೀಕೆಗಳು ಕೇಳಿ ಬಂದಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.