ಶನಿವಾರ, ಮೇ 15, 2021
25 °C

ಇಂಡಿಯಾನಾಪೊಲೀಸ್‌ನಲ್ಲಿ ದಾಳಿ: ಬಂದೂಕುದಾರಿ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇಂಡಿಯಾನಾಪೊಲೀಸ್: ಅಮೆರಿಕದ ಇಂಡಿಯಾನಾಪೊಲೀಸ್‌ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಹಲವರು ತೀವ್ರ ಗಾಯಗೊಂಡಿದ್ದಾರೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ‘ಫೆಡೆಕ್ಸ್‌ ಫೆಸಿಲಿಟಿ’ ಕಂಪನಿಯಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿ ನಡೆಸಿದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಲ್ಲಿ ಎಷ್ಟು ಜನ ಗಾಯಗೊಂಡಿದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

‘ವ್ಯಕ್ತಿಯೊಬ್ಬ ಮಷಿನ್‌ ಗನ್‌ನಿಂದ ದಾಳಿ ನಡೆಸಿದ. ಮುಕ್ತ ಜಾಗದಲ್ಲಿ ಆತ ಗುಂಡಿನ ದಾಳಿ ನಡೆಸಿದ’ ಎಂದು ಪ್ರತ್ಯಕ್ಷದರ್ಶಿಯಾಗಿದ್ದ ಜೆರೆಮಿಯಾಹ್‌ ಮಿಲ್ಲರ್‌ ಎನ್ನುವವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.