ಶುಕ್ರವಾರ, ಏಪ್ರಿಲ್ 23, 2021
28 °C
ವಿಶ್ವಸಂಸ್ಥೆ ಸಾಮಾನ್ಯಸಭೆಯಲ್ಲಿ ಭಾರತ ಪ್ರತಿಪಾದನೆ

ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪನೆ ಆದ್ಯತೆಯಾಗಲಿ: ಭಾರತ ಪ್ರತಿಪಾದನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಮಿಲಿಟರಿ ದಂಗೆಯಿಂದ ನಲುಗಿರುವ ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರುಸ್ಥಾಪಿಸಿರುವುದು, ಬಂಧನಕ್ಕೆ ಒಳಗಾಗಿರುವ ನಾಯಕರ ಬಿಡುಗಡೆ ನಮ್ಮ ಆದ್ಯತೆಯಾಗಬೇಕು ಎಂದು ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಭಾರತ ಪ್ರತಿಪಾದಿಸಿದೆ.

‘ಶಾಂತಿಯುತ ಹಾಗೂ ರಚನಾತ್ಮಕ ಮಾರ್ಗದ ಮೂಲಕ ಮ್ಯಾನ್ಮಾರ್‌ ತನ್ನ ಆಂತರಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು’ ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ರಾಯಭಾರಿಯಾಗಿರುವ ಟಿ.ಎಸ್‌.ತಿರುಮೂರ್ತಿ ಹೇಳಿದರು.

‘ಮ್ಯಾನ್ಮಾರ್‌ನೊಂದಿಗೆ ಭಾರತ ಭೂ ಹಾಗೂ ಸಾಗರ ಗಡಿಯನ್ನು ಹಂಚಿಕೊಂಡಿದೆ. ಹೀಗಾಗಿ ಈ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವುದು ಭಾರತದ ಜವಾಬ್ದಾರಿಯಾಗಿದೆ’ ಎಂದರು.

‘ಮ್ಮಾನ್ಮಾರ್‌ನಲ್ಲಿ ಇತ್ತೀಚಿನ ಬೆಳವಣಿಗೆಗಳನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಹಲವು ದಶಕಗಳ ಹೋರಾಟದ ಫಲವಾಗಿ ಆ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಿದೆ. ಆ ಪ್ರಯತ್ನವನ್ನು ವ್ಯರ್ಥಗೊಳಿಸಬಾರದು’ ಎಂದೂ ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು