ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಡನ್‌ನಲ್ಲಿ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ನಿವಾಸದ ಎದುರು ಪ್ರತಿಭಟನೆ

Last Updated 11 ಏಪ್ರಿಲ್ 2022, 4:22 IST
ಅಕ್ಷರ ಗಾತ್ರ

ಲಂಡನ್‌: ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಅಂಗೀಕಾರವಾಗಿರುವ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ನಿವಾಸ ಎದುರು ಪ್ರತಿಭಟನೆಗಳು ನಡೆದಿವೆ.

ಲಂಡನ್‌ನಲ್ಲಿ ವಾಸ ಇರುವ ನವಾಜ್‌ ಷರೀಫ್‌ ಅವರ ನಿವಾಸದ ಎದುರು ಭಾನುವಾರ ತಡರಾತ್ರಿವರೆಗೂ ಪ್ರತಿಭಟನೆಗಳು ನಡೆದಿವೆ.

ಪಾಕಿಸ್ತಾನ ಮುಸ್ಲಿಂ ಲೀಗ್‌–ನವಾಜ್‌ (ಪಿಎಂಎಲ್‌–ಎನ್‌) ಅಧ್ಯಕ್ಷ ಹಾಗೂ ನವಾಜ್‌ ಷರಿಪ್‌ ಅವರ ಸಹೋದರ ಶಾಹಬಾಝ್‌ ಷರೀಫ್‌ ಅವರು ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇದನ್ನು ವಿರೋದಿಸಿ ಇಮ್ರಾನ್‌ ಖಾನ್‌ ಅವರಪಾಕಿಸ್ತಾನ ಪೀಪಲ್ಸ್‌ ಪಾರ್ಟಿಯ (ಪಿಟಿಐ) ಕಾರ್ಯಕರ್ತರು ಷರಿಪ್‌ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಪಿಟಿಐ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದ ನವಾಜ್‌ ಷರೀಫ್‌ ಬೆಂಬಲಿಗರು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಲಂಡನ್‌ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರತಿಭಟನೆ ನಡೆಯುತ್ತಿದ್ದರೂ ನವಾಜ್‌ ಷರೀಫ್‌ ನಿವಾಸದಿಂದ ಹೊರ ಬರಲಿಲ್ಲ. ಪಾಕಿಸ್ತಾನದ ಈ ಬೆಳವಣಿಗೆಗಳಿಗೆ ನವಾಜ್‌ ಷರಿಪ್‌ ಕಾರಣ, ಸಹೋದರನನ್ನು ಪ್ರಧಾನಿ ಮಾಡಲು ನವಾಜ್‌ ಷರೀಫ್‌ ಈ ರಾಜಕೀಯ ಹುನ್ನಾರ ನಡೆಸಿದ್ದಾರೆ ಎಂದು ಪಿಟಿಐ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ಇಮ್ರಾನ್ ಅವರನ್ನು ಶನಿವಾರ ತಡರಾತ್ರಿ ಅವಿಶ್ವಾಸ ನಿರ್ಣಯದ ಮೂಲಕ ಪದಚ್ಯುತಗೊಳಿಸಲಾಗಿದೆ. ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ಪಾಕಿಸ್ತಾನ ಸಂಸತ್ತಿನಲ್ಲಿ ಆರಂಭಗೊಂಡಿದ್ದರೂದೇಶದ ರಾಜಕೀಯ ಅನಿಶ್ಚಿತ ಸ್ಥಿತಿ ಮುಂದುವರೆದಿದೆ.

ಈ ನಡುವೆ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್‌ ಖುರೇಷಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಇಮ್ರಾನ್‌ ಖಾನ್‌ ಅವರ ಪಿಟಿಐ ಪಕ್ಷ ಘೋಷಣೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT