ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಗುಂಡು ಹಾರಿಸಿ ಪ್ರತಿಭಟನಕಾರನ ಕೊಲೆ, ಬಳಿಕ ಆತ್ಮಹತ್ಯೆಗೆ ಶರಣಾದ ಸಂಸದ

Last Updated 9 ಮೇ 2022, 13:20 IST
ಅಕ್ಷರ ಗಾತ್ರ

ಕೊಲಂಬೊ(ಎಎಫ್‌ಪಿ): ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಆಡಳಿತಾರೂಢ ಸಂಸದರೊಬ್ಬರು ಸರ್ಕಾರಿ ವಿರೋಧಿ ಪ್ರತಿಭಟನಕಾರರೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಅಲ್ಲದೆ, ಈ ವೇಳೆ ಪ್ರತಿಭಟನಕಾರರಿಂದ ಸುತ್ತುವರಿಯಲ್ಪಟ್ಟ ಅವರು, ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ನಿಟ್ಟಂಬುವಾ ಎಂಬ ಪಟ್ಟಣದಲ್ಲಿ ಕಾರಿನಲ್ಲಿ ಹೊರಟಿದ್ದ ಸಂಸದ ಅಮರಕೀರ್ತಿ ಅತುಕೊರಲಾ ಅವರನ್ನು ಪ್ರತಿಭಟನಕಾರರು ತಡೆದರು. ಈ ವೇಳೆ ಕಾರಿನಿಂದ ಇಳಿದ ಅವರು, ಕಾರಿಗೆ ಅಡ್ಡಗಟ್ಟಿದ್ದ ಇಬ್ಬರ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ಸಮೀಪದ ಕಟ್ಟಡವೊಂದಕ್ಕೆ ತೆರಳಿ ಅವಿತುಕೊಂಡಿದ್ದರು. ಆಗ ಸಾವಿರಾರು ಪ್ರತಿಭಟನಕಾರರು ಕಟ್ಟಡವನ್ನು ಸುತ್ತುವರಿದರು. ಈ ವೇಳೆ ಸಂಸದರು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ರಾಜಪಕ್ಸ ಬೆಂಬಲಿಗರು ನಡೆಸಿದ ದೌರ್ಜನ್ಯ ಮತ್ತು ಹಲ್ಲೆ ಘಟನೆಗಳನ್ನು ವಿರೋಧಿಸಿ ಸೋಮವಾರ ದೇಶದಾದ್ಯಂತ ಕರ್ಫ್ಯೂ ಆದೇಶದ ನಡುವೆಯೇ ಸಾವಿರಾರು ಮಂದಿ ಬೀದಿಗಿಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT