ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಅಧ್ಯಕ್ಷ ಬೈಡನ್‌, ಬ್ಲಿಂಕನ್‌ ಸೇರಿದಂತೆ ಹಲವರಿಗೆ ರಷ್ಯಾ ನಿರ್ಬಂಧ

Last Updated 15 ಮಾರ್ಚ್ 2022, 16:05 IST
ಅಕ್ಷರ ಗಾತ್ರ

ಲಂಡನ್‌: ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳ ಮೇಲೆ ರಷ್ಯಾ ನಿರ್ಬಂಧ ಹೇರಿದೆ.

ರಕ್ಷಣಾ ಕಾರ್ಯದರ್ಶಿ ಲಾಯ್ಡ್‌ ಆಸ್ಟಿನ್‌, ಸಿಐಎ ಮುಖ್ಯಸ್ಥ ವಿಲಿಯಂ ಬರ್ನ್ಸ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲಿವಾನ್‌ ಸೇರಿದಂತೆ ಒಟ್ಟು 13 ಜನರ ಹೆಸರುಗಳನ್ನು ರಷ್ಯಾ ನಿರ್ಬಂಧ ಪಟ್ಟಿಗೆ ಸೇರಿಸಿದೆ. ರಷ್ಯಾದ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳಿಗೆ ಪ್ರತಿಯಾಗಿ ಈ ಕ್ರಮಕೈಗೊಳ್ಳಲಾಗಿದೆ.

ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್‌ ಅವರ ಹೆಸರೂ ನಿರ್ಬಂಧಿತರ ಪಟ್ಟಿಯಲ್ಲಿದೆ.

ಆದರೆ, ಅಮೆರಿಕ ಜೊತೆಗಿನ ಅಧಿಕೃತ ಬಾಂಧವ್ಯ ಮುಂದುವರಿಯಲಿದೆ. ಅಗತ್ಯ ಎನಿಸಿದರೆ ಈ ಪಟ್ಟಿಯಲ್ಲಿ ಇರುವವರನ್ನೂ ಒಳಗೊಂಡಂತೆ ಉನ್ನತ ಮಟ್ಟದ ಮಾತುಕತೆ ನಡೆಯಬಹುದು ಎಂದು ರಷ್ಯಾದ ವಿದೇಶಾಂಗ ಸಚಿವಾಲಯವು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT