ರಷ್ಯಾ ವಿರುದ್ಧ ಪ್ರತಿಭಟನೆ: ಪುಟಿನ್ ಸರ್ಕಾರದಿಂದ ಕೆನಡಾಗೆ ಬೆದರಿಕೆ

ಮಾಸ್ಕೋ: ತನ್ನ ರಾಜತಾಂತ್ರಿಕ ಅಧಿಕಾರಿಗಳಿಗೆ ರಕ್ಷಣೆ ನೀಡಲು ವಿಫಲವಾದರೆ ಕೆನಡಾದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ರಷ್ಯಾ ಬೆದರಿಕೆ ಹಾಕಿದೆ ಎಂದು ಸುದ್ದಿಸಂಸ್ಥೆ ‘ರಾಯಿಟರ್ಸ್’ ವರದಿ ಮಾಡಿದೆ.
ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿ ಕೆನಡಾ ರಾಜಧಾನಿ ಒಟ್ಟಾವದಲ್ಲಿರುವ ರಷ್ಯಾ ರಾಯಭಾರ ಕಚೇರಿ ಮುಂದೆ ಭಾನುವಾರ ಭಾರಿ ಪ್ರತಿಭಟನೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಮಾಸ್ಕೋದಲ್ಲಿನ ಕೆನಡಾ ರಾಯಭಾರಿಗೆ ಕರೆ ಮಾಡಿರುವ ರಷ್ಯಾ ವಿದೇಶಾಂಗ ಸಚಿವಾಲಯವು ಪ್ರತಿಭಟನೆಯ ಬಗ್ಗೆ ದೂರು ನೀಡಿದೆ.
ಕೆನಡಾದಲ್ಲಿ ನೆಲೆಸಿರುವ ತನ್ನ ದೇಶದ ರಾಜತಾಂತ್ರಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ಪರಿಣಾಮ ಗಂಭೀರವಾಗಿರಲಿದೆ ಎಂದು ರಷ್ಯಾ ವಿದೇಶಾಂಗ ಸಚಿವಾಲಯ ಹೇಳಿದೆ.
ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ 14 ಮಕ್ಕಳು ಸೇರಿದಂತೆ, 350ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆಂದು ವರದಿಯಾಗಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ರಷ್ಯಾ ಕೂಡಲೇ ದಾಳಿ ನಿಲ್ಲಿಸುವಂತೆ ಆಗ್ರಹಿಸಿ ಅನೇಕ ದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಯುತ್ತಿವೆ.
ಇವನ್ನೂ ಓದಿ...
ಉಕ್ರೇನ್ಗೆ ಶಸ್ತ್ರಾಸ್ತ್ರ ಪೂರೈಕೆ: ಐರೋಪ್ಯ ಒಕ್ಕೂಟ ದೇಶಗಳ ರಕ್ಷಣಾ ಸಚಿವರ ಸಭೆ
ಪೋಲೆಂಡ್ ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಥಳಿಸಿದ ಉಕ್ರೇನ್ ಯೋಧರು
ಕಣ್ಣೆದುರೇ ಸಾವಿನ ಭೀಕರತೆ ಕಂಡೆ: ಉಕ್ರೇನ್ನಿಂದ ರಾಜ್ಯದ ವಿದ್ಯಾರ್ಥಿನಿ ಭಯದ ಮಾತು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.