ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಧಾನ ಸಭೆ ನಡುವೆ ಉಕ್ರೇನ್‌ ಮೇಲೆ ದಾಳಿ ಮುಂದುವರಿಸಿದ ರಷ್ಯಾ

Last Updated 15 ಮಾರ್ಚ್ 2022, 2:06 IST
ಅಕ್ಷರ ಗಾತ್ರ

ಲಿವಿವ್‌: ರಷ್ಯಾ ಮತ್ತು ಉಕ್ರೇನ್‌ ನಡುವೆ ರಾಜತಾಂತ್ರಿಕ ಮಾತುಕತೆಗಳು ನಡೆಯುತ್ತಿರುವ ಹೊತ್ತಲ್ಲೇ ರಷ್ಯಾ ಪಡೆ ಕೀವ್‌ ಮತ್ತು ಇತರ ನಗರಗಳ ಮೇಲಿನ ದಾಳಿಯನ್ನು ಮುಂದುವರಿಸಿದೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಸೋಮವಾರ ನಾಲ್ಕು ಸುತ್ತಿನ ಮಾತುಕತೆಗಳು ನಡೆದಿವೆ. ಉಭಯ ರಾಷ್ಟ್ರಗಳ ಉನ್ನತ ನಾಯಕರನ್ನು ಒಳಗೊಂಡ ಸಭೆಯು ಯಾವುದೇ ಮಹತ್ವದ ನಿರ್ಧಾರವಿಲ್ಲದೆ ಮುಗಿದಿದೆ. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರು, 'ಸಂಧಾನಕಾರರು ತಾಂತ್ರಿಕ ವಿರಾಮವನ್ನು ಪಡೆದಿದ್ದಾರೆ. ಮಂಗಳವಾರ ಪುನಃ ಯೋಜಿತ ಸಭೆ ನಡೆಸಲು ಮುಂದಾಗಿದ್ದಾರೆ' ಎಂದು ತಿಳಿಸಿದ್ದಾರೆ.

'ರಷ್ಯಾ ಜೊತೆಗಿನ ಮಾತುಕತೆಗೆ ಉಕ್ರೇನ್‌ ಭಾಗವಹಿಸುವಿಕೆಯನ್ನು ಅಮೆರಿಕ ಬೆಂಬಲಿಸುತ್ತದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಮನಸ್ಸು ಮಾಡುವ ಮೂಲಕ ವಿಶ್ವಾಸವನ್ನು ಉಳಿಸಿಕೊಳ್ಳಬೇಕು' ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್‌ ಸಾಕಿ ತಿಳಿಸಿದ್ದಾರೆ.

ಅಮೆರಿಕದ ರಕ್ಷಣಾ ಪಡೆಯ ಹಿರಿಯ ಅಧಿಕಾರಿಗಳ ಪ್ರಕಾರ, ರಷ್ಯಾ ಪಡೆಗಳು ಕೀವ್‌ನ ಹೃದಯ ಭಾಗಕ್ಕೆ ಲಗ್ಗೆಯಿಡಲು ಕೇವಲ 15 ಕಿ.ಮೀ. ಅಂತರದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT